ಮೇಯಲು ಹೋಗಿದ್ದ 38 ಕುರಿಗಳು ದಿಢೀರ್ ಸಾವು, ಏನಿದು ಪ್ರಕರಣ?
ಸೊರಬ: ಮೇಯಲು ತೆರಳಿದ್ದ 38 ಕುರಿಗಳು (Sheep) ದಿಢೀರ್ ಅಸ್ವಸ್ಥಗೊಂಡು ಸಾವನ್ನಪ್ಪಿವೆ. ಸೊರಬ ಪಟ್ಟಣದ ಬಂಗಾರಪ್ಪ ಸ್ಟೇಡಿಯಂ ಬಳಿ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಖಡಕಲಾಟ ಗ್ರಾಮದ ಕುರಿಗಾಹಿ ಸುರೇಶ ಬೀರಾ ಅವಡಖಾನ ಅವರಿಗೆ ಸೇರಿರುವ ಕುರಿಗಳು ಮೃತಪಟ್ಟಿವೆ. ಸ್ಥಳಕ್ಕೆ ಪಶು ವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಸ್ವಸ್ಥ ಕುರಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಬುಧವಾರ 12 ಕುರಿಗಳು ಮೃತಪಟ್ಟಿದ್ದು, ಗುರುವಾರ 26 ಕುರಿಗಳು ಸಾವಿಗೀಡಾಗಿವೆ. ಸ್ಥಳಕ್ಕೆ ಪಶು ಪ್ರಯೋಗಾಲಯದ ಅಧಿಕಾರಿಗಳು ಭೇಟಿ ನೀಡಿದ್ದು, ವಿಷಪೂರಿತ ಆಹಾರ ಸೇವಿಸಿ … Read more