ಶಿವಮೊಗ್ಗದಲ್ಲಿ ಜಾತಿ ಸಮೀಕ್ಷೆಗೆ ತೆರಳಿದ್ದ ಸಿಬ್ಬಂದಿ ಮೇಲೆ ಬೀದಿ ನಾಯಿ ದಾಳಿ
ಶಿವಮೊಗ್ಗ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ತೆರಳಿದ್ದ ಸಿಬ್ಬಂದಿ ಮೇಲೆ ಶಿವಮೊಗ್ಗದಲ್ಲಿ ಬೀದಿನಾಯಿ (Dog) ದಾಳಿ ನಡೆಸಿದೆ. ಗಾಯಗೊಂಡಿರುವ ಸಿಬ್ಬಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಶಿವಮೊಗ್ಗದ ರವಿವರ್ಮ ಬೀದಿ, ಆಜಾದ್ ನಗರ ಭಾಗದಲ್ಲಿ ಸರ್ವೆ ಕಾರ್ಯಕ್ಕೆ ತೆರಳಿದ್ದ ಅಬ್ಬಲಗೆರೆ ಸರ್ಕಾರಿ ಪ್ರೌಢಶಾಲೆಯ ಪ್ರಥಮ ದರ್ಜೆ ಸಹಾಯಕಿ ಉಮಾರಾಣಿ ಅವರ ಮೇಲೆ ನಾಯಿ ದಾಳಿ ಮಾಡಿದೆ. ಎಡಗಾಲಿಗೆ ನಾಯಿ ಕಚ್ಚಿದ್ದು ರಕ್ತ ಸುರಿಯುತ್ತಿದ್ದರು ಗಣತಿ ಕಾರ್ಯ ಮುಗಿಸಿ ಉಮಾರಾಣಿ ಅವರು ಮೆಗ್ಗಾನ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. … Read more