ತೀರ್ಥಹಳ್ಳಿಯಲ್ಲಿ ಇಬ್ಬರು ಮಹಿಳೆಯರಿಗೆ KFD ಪಾಸಿಟಿವ್, ಕನ್ನಂಗಿ ಭಾಗದಲ್ಲಿ ಆತಂಕ

Kannangi Graphics

SHIVAMOGGA LIVE NEWS | 9 ಮಾರ್ಚ್ 2022 ತೀರ್ಥಹಳ್ಳಿ ತಾಲೂಕಿನಲ್ಲಿ KFD ಆತಂಕ ಮುಂದುವರೆದಿದೆ. ಇಬ್ಬರು ಮಹಿಳೆಯರು KFD ಸೋಂಕಿಗೆ ತುತ್ತಾಗಿದ್ದಾರೆ. ಕನ್ನಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವತ್ತಿ ಗ್ರಾಮದಲ್ಲಿ ಕಲ್ಪನಾ (40) ಮತ್ತು ದೇವಕಿ (45) ಎಂಬುವವರಿಗೆ KFD ಪಾಸಿಟಿವ್ ಬಂದಿದೆ. ಕಲ್ಪನಾ ಅವರು ದಾವಣಗೆರೆ ಜಿಲ್ಲೆಯಿಂದ ಯಡವತ್ತಿ ಗ್ರಾಮಕ್ಕೆ ಕೆಲಸಕ್ಕೆಂದು ಬಂದಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಅವರು ಜೆ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿದ್ದಾರೆ. ಇನ್ನು, ದೇವಕಿ ಅವರಿಗೆ ಜೆ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯ ಸ್ಥಿರವಾಗಿದೆ. … Read more

‘ಸಿಗಂದೂರು 108’ ಮತ್ತೆ ನಾಪತ್ತೆ, ನಿರ್ಲಕ್ಷ್ಯಕ್ಕೆ ಮಗು ಬಲಿ, ಇನ್ನೆಷ್ಟು ಜನರ ಸಾವಿಗೆ ಕಾಯುತ್ತಿದೆ ಆಡಳಿತ?

Tumari Ambulance in Near Sigandur

ಶಿವಮೊಗ್ಗದ ಲೈವ್.ಕಾಂ | SAGARA NEWS | 10 ಫೆಬ್ರವರಿ 2022 108 ಆಂಬುಲೆನ್ಸ್ ಇಲ್ಲದೆ ತುಮರಿ ಭಾಗದಲ್ಲಿ ಮತ್ತೊಂದು ಹಸುಗೂಸು ಸಾವನ್ನಪ್ಪಿದೆ. ಇಂತಹ ಘಟನೆಗಳು ಪದೇ ಪದೆ ನಡೆಯುತ್ತಿದ್ದರೂ, ಅಧಿಕಾರಿಗಳು, ಜನಪ್ರತಿನಿಧಿಗಳು ಕ್ಯಾರೆ ಅನ್ನದಿರುವುದಕ್ಕೆ ಜನರು ಆಕ್ರೋಶಗೊಂಡಿದ್ದಾರೆ. ಸಾಗರ ತಾಲೂಕು ಶರಾವತಿ ಕಣಿವೆಯ ಸಸಿಗೊಳ್ಳಿ ಎಲ್ದಮಕ್ಕಿ ಗ್ರಾಮದ ಉಮೇಶ್ ಮತ್ತು ಗೀತಾ ದಂಪತಿಯ ಮಗು ಸಾವನ್ನಪ್ಪಿದೆ. 45 ದಿನದ ಶಿಶುವಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ತುರ್ತಾಗಿ ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ಸಿಗದೆ ಮಗು ಮೃತಪಟ್ಟಿದೆ. ಎರಡು … Read more

ಆಯನೂರು | ನಡೆದು ಹೋಗುತ್ತಿದ್ದ ಯುವಕರಿಗೆ ಖಾಸಗಿ ಬಸ್ ಡಿಕ್ಕಿ

crime name image

ಶಿವಮೊಗ್ಗದ ಲೈವ್.ಕಾಂ | ಆಯನೂರು NEWS | 30 ಜನವರಿ 2022 ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು, ರಸ್ತೆ ಬದಿ ನಡೆದು ಹೋಗುತ್ತಿದ್ದ ಮೂವರು ಯುವಕರಿಗೆ ಗುದ್ದಿದೆ. ಆಯನೂರು ಬಳಿ ಶನಿವಾರ ಘಟನೆ ಸಂಭವಿಸಿದೆ. ಹಾರನಹಳ್ಳಿಯ ಅಲ್ಲಾಭಕ್ಷಿ, ರಾಹುಲ್ ಮತ್ತು ಕಿರಣ್ ಎಂಬುವವರು ಗಾಯಗೊಂಡಿದ್ದಾರೆ. ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಮೂವರು ಯುವಕರು ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಬಸ್ ಗುದ್ದುತ್ತಿದ್ದಂತೆ ಸ್ಥಳೀಯರು ಯುವಕರಿಗೆ ನೆರವಾಗಿದ್ದಾರೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … Read more

ಶಿವಮೊಗ್ಗದಲ್ಲಿ ಇವತ್ತೂ ಮುಂದುವರೆದ ಕರೋನ ಅಬ್ಬರ, ಒಂದು ಸಾವಿರದ ಗಡಿ ದಾಟಿದ ಸಕ್ರಿಯ ಪ್ರಕರಣ

Corona PPE Kit and swab box

ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಜನವರಿ 2022 ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಅಬ್ಬರ ಮುಂದುವರೆದಿದೆ. ಇವತ್ತು 288 ಮಂದಿಗೆ ಪಾಸಿಟಿವ್ ಬಂದಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಸಾವಿರದ ಗಡಿ ದಾಟಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಇವತ್ತು ಪಾಸಿಟಿವ್ ಬಂದಿರುವವರ ಪೈಕಿ ಶಿವಮೊಗ್ಗ ತಾಲೂಕಿನ 121 ಮಂದಿ, ಭದ್ರಾವತಿಯ 65, ತೀರ್ಥಹಳ್ಳಿಯ 10, ಶಿಕಾರಿಪುರದ 3, ಸಾಗರದ 39, ಹೊಸನಗರದ 37, ಸೊರಬ 2, ಇತರೆ ಜಿಲ್ಲೆಯಿಂದ … Read more

BREAKING NEWS | ತಾಳಗುಪ್ಪ ಸಮೀಪ ಖಾಸಗಿ ಬಸ್ ಪಲ್ಟಿ

251121 Bus Accident At Talaguppa in Sagara Taluk

ಶಿವಮೊಗ್ಗ ಲೈವ್.ಕಾಂ | SAGARA NEWS | 25 ನವೆಂಬರ್ 2021 ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ರಸ್ತೆ ಪಕ್ಕಕ್ಕೆ ಹೋಗಿ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರುಗೆ ಗಾಯಗೊಂಡಿದ್ದು, ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾಗರ ತಾಲೂಕು ತಾಳಗುಪ್ಪ ಸಮೀಪದ ಬಲೇಗಾರ್ ಕ್ರಾಸ್ ಬಳಿ ಘಟನೆ ಸಂಭವಿಸಿದೆ. ಭಟ್ಕಳದಿಂದ ಬೈಂದೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಅಪಘಾತಕ್ಕೀಡಾಗಿದೆ. ತಾಂತ್ರಿಕ ದೋಷದಿಂದ ಬಸ್ಸು ಚಾಲಕ ನಿಯಂತ್ರಣ ತಪ್ಪಿದೆ ಎಂದು ಹೇಳಲಾಗುತ್ತಿದೆ. ಬಸ್ಸು ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರು ಮತ್ತು … Read more

ಸಾಗರ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಬೇಳೂರಿಗೆ ಪಕ್ಷದಿಂದ ಬಿಗ್ ರಿಲೀಫ್

181121 Sagara Ashok Belur In Bajarangadal Programme Controversy

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ನವೆಂಬರ್ 2021 ಸಾಗರ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಬೇಳೂರು ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ. ಭಜರಂಗದಳ ಸಂಘಟನೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಆರೋಪದ ಹಿನ್ನೆಲೆ ಪಕ್ಷದಿಂದ ಅಮಾನತು ಮಾಡಲಾಗಿತ್ತು. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ ಅವರ ಸೂಚನೆ ಹಿನ್ನೆಲೆಯಲ್ಲಿ ಅಶೋಕ್ ಬೇಳೂರು ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಟಿ.ಎಸ್.ಪ್ರದೀಪ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಶೋಕ್ ಬೇಳೂರು ಅವರು ಸಾಗರ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ. … Read more

150ಕ್ಕೂ ಹೆಚ್ಚು ಜನರು ದಿಢೀರ್ ಅಸ್ವಸ್ಥ, ಹೊಟ್ಟೆ ನೋವು, ವಾಂತಿ, ಭೇದಿಯಿಂದ ಹಲವರು ಆಸ್ಪತ್ರೆಗೆ

Sagara Government Hospital

ಶಿವಮೊಗ್ಗ ಲೈವ್.ಕಾಂ | SAGARA NEWS | 13 ನವೆಂಬರ್ 2021 ಜೋಗ, ಕಾರ್ಗಲ್, ಲಿಂಗನಮಕ್ಕಿ ಸುತ್ತಮುತ್ತ 150ಕ್ಕೂ ಹೆಚ್ಚು ಮಂದಿ ದಿಢೀರ್ ಅಸ್ವಸ್ಥಗೊಂಡಿದ್ದಾರೆ. ಎಲ್ಲರಲ್ಲೂ ವಾಂತಿ, ಭೇದಿ, ಹೊಟ್ಟೆ ನೋವು ಕಾಣಿಸಿಕೊಂಡು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜನರು ದಿಢೀರ್ ಅಸ್ವಸ್ಥಗೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಆಹಾರ ಅಥವಾ ನೀರಿನಲ್ಲಿ ಸಮಸ್ಯೆ ಉಂಟಾಗಿ ಈ ರೀತಿಯಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಏನಿದು ಪ್ರಕರಣ? ಶುಕ್ರವಾರ ಬೆಳಗ್ಗೆಯಿಂದಲೇ ಜನರು ದಿಢೀರ್ ಅಸ್ವಸ್ಥಗೊಂಡ ಕಾರ್ಗಲ್ ಆಸ್ಪತ್ರೆಗೆ … Read more

ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ, ಡಿಸೆಂಬರ್ 16ರವರೆಗೆ ಕಟ್ಟುನಿಟ್ಟು ಪಾಲನೆ, ಶಿವಮೊಗ್ಗದಲ್ಲಿ ಎಷ್ಟಿದ್ದಾರೆ ಮತದಾರರು?

101121 Shimoga Vidhana Parishad Voters Meeting DC Office

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ನವೆಂಬರ್ 2021 ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರ ಚುನಾವಣೆಗೆ ಸಾರ್ವತ್ರಿಕ ಮತದಾನ ರೀತಿಯಲ್ಲಿ ಮಾದರಿ ನೀತಿ ಸಂಹಿತೆ ಅನ್ವಯವಾಗಲಿದೆ. ಅದನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು, ನೀತಿ ಸಂಹಿತೆ ತಕ್ಷಣದಿಂದ ಜಾರಿಗೆ ಬಂದಿದ್ದು, ಡಿಸೆಂಬರ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಹೇಳಿದರು. ಮಾದರಿ ನೀತಿ ಸಂಹಿತೆ … Read more

33 ಲಕ್ಷ ರೂ. ಸರ್ಕಾರದ ನೆರವು ತಿರಸ್ಕರಿಸಿ ಸಾಹಸಕ್ಕೆ ಕೈ ಹಾಕಿದ ಚರಕದ ಮಹಿಳೆಯರು

050921 Charaka Women about Exhibition in Shimoga

ಶಿವಮೊಗ್ಗ ಲೈವ್.ಕಾಂ |SHIMOGA / SAGARA NEWS | 5 ಸೆಪ್ಟೆಂಬರ್ 2021 ಮೂರು ವರ್ಷವಾದರೂ ಸರ್ಕಾರ ಘೋಷಿಸಿದ ಲಕ್ಷಾಂತರ ರೂಪಾಯಿ ಅನುದಾನ ಕೈ ಸೇರಲಿಲ್ಲ. ಹಾಗಾಗಿ ಆ ದುಡ್ಡನ್ನೆ ತಿರಸ್ಕರಿಸಿದ ಮಹಿಳೆಯರು ಮತ್ತೊಂದು ದಿಟ್ಟ ಹೆಜ್ಜೆ ಇರಿಸಿದ್ದಾರೆ. ತಾವು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವೇದಿಕೆ ಸಿದ್ಧಪಡಿಸಿಕೊಂಡಿದ್ದಾರೆ. ಮಹಿಳೆಯರ ಈ ನಡೆ ಅಧಿಕಾರಿಗಳ ಜಾಣ ಕುರುಡುತನಕ್ಕೆ ತಪರಾಕಿ ಕೊಟ್ಟಂತಾಗಿದೆ. ಸಾಗರ ತಾಲೂಕು ಭೀಮನಕೋಣೆಯ ಚರಕ ಮಹಿಳಾ ವಿವಿದೋದ್ದೇಶ ಕೈಗಾರಿಕಾ ಸಹಕಾರ ಸಂಘದ ವತಿಯಿಂದ ‘ಪವಿತ್ರ … Read more

ಶಿವಮೊಗ್ಗ ನಗರ, ತಾಲೂಕಿನ ವಿವಿಧೆಡೆ ಆಗಸ್ಟ್ 4, 5ರಂದು ಕರೆಂಟ್ ಕಟ್, ಎಲ್ಲೆಲ್ಲಿ? ಎಷ್ಟು ಹೊತ್ತು ವಿದ್ಯುತ್ ವ್ಯತ್ಯಯ ಆಗತ್ತೆ?

power cut graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2021 ವಿವಿಧೆಡೆ ಮೆಸ್ಕಾಂ ವತಿಯಿಂದ ಕಾಮಗಾರಿಗಳು ನಡೆಯುತ್ತಿರುವುದರಿಂದ ಶಿವಮೊಗ್ಗ ನಗರ ಮತ್ತು ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗುವ ಸಂಭವವಿದೆ. ಆಗಸ್ಟ್ 4 ಮತ್ತು 5ರಂದು ಪ್ರತ್ಯೇಕವಾಗಿ ವಿದ್ಯುತ್ ವ್ಯತ್ಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಂತೆಕಡೂರು, ಉಂಬ್ಳೆಬೈಲು ಸುತ್ತಮುತ್ತ ಸಂತೇಕಡೂರು ವಿವಿ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಅದ್ದರಿಂದ ಆಗಸ್ಟ್ 4ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿವಿಧೆಡೆ ವಿದ್ಯುತ್ … Read more