ಐತಿಹಾಸಿಕ ಬಿದನೂರು ಕೋಟೆಯಲ್ಲಿ ನಿರ್ಮಾಣವಾಗುತ್ತೆ ಶೌಚಾಲಯ

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 24 ಅಕ್ಟೋಬರ್ 2020 ಐತಿಹಾಸಿಕ ಬಿದನೂರು ಕೋಟೆ ಬಳಿ ಶೌಚಗೃಹ ನಿರ್ಮಾಣಕ್ಕೆ  ಎದುರಾಗಿದ್ದ ಅಡೆತಡೆಗಳು ನಿವಾರಣೆಯಾಗಿದೆ. ಶೀಘ್ರದಲ್ಲಿ ಶೌಚಗೃಹ ನಿರ್ಮಿಸಲಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸುರೇಶ್ ಸ್ವಾಮಿರಾವ್ ತಿಳಿಸಿದ್ದಾರೆ. ಮೂಡುಗೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಏರ್ಪಡಿಸಿದ್ದ ಸ್ವಚ್ಛ ಸಂಕೀರ್ಣ ಘಟಕದ ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿದ ಅವರು, ಬಿದನೂರು ಕೋಟೆಗೆ ಬರುತ್ತಿದ್ದ ಪ್ರವಾಸಿಗರು ಶೌಚಾಲಯವಿಲ್ಲದೆ ಪರದಾಡುತ್ತಿದ್ದರು. ಈ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿ, ಶೌಚಾಲಯ ನಿರ್ಮಿಸಲಾಗುತ್ತಿದೆ ಎಂದರು. ಶಿವಮೊಗ್ಗ ಲೈವ್.ಕಾಂನಲ್ಲಿ … Read more

ಕರೋನ ನಿರ್ವಹಣೆಯಲ್ಲಿ ಶಿವಮೊಗ್ಗ ತಾಲೂಕು ಆಡಳಿತ ವಿಫಲ, ತಾಲೂಕು ಪಂಚಾಯಿತಿಯಲ್ಲಿ ಸದಸ್ಯರ ಆಕ್ರೋಶ

181020 Taluk Panchayat Meeting Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಅಕ್ಟೋಬರ್ 2020 ಕರೊನಾ ನಿರ್ವಹಣೆಯ ಆರಂಭದಿಂದಲೂ ತಾಲೂಕು ಆಡಳಿತ ವಿಫಲವಾಗಿದೆ. ಕರೊನಾ ಸೋಂಕಿತರನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ಚಾಲಕನಿಗೆ ಎರಡೂವರೆ ಸಾವಿರ ರೂ. ನೀಡಬೇಕೆಂಬ ವಿಷಯದ ತಾಲೂಕಿನಲ್ಲಿ ಹರಿದಾಡುತ್ತಿದೆ ಎಂದು ಸಾಮಾಜಿಕ ನ್ಯಾಯಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಜಿ.ಶ್ರೀಧರ್ ದೂರಿದರು. ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಕರೋನ ನಿರ್ವಹಣೆಯಲ್ಲಿ ತಾಲೂಕು ಆಡಳಿತದ ವೈಫಲ್ಯದ ಕುರಿತು ಸದಸ್ಯರು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಕರೋನ ನಿರ್ವಹಣೆ ವೈಫಲ್ಯದ ಕುರಿತು ಅನೇಕ ಸದಸ್ಯರು … Read more

ಜಿಂಕೆ ಬೇಟೆಯಾಡಿ, ಮಾಂಸ ಬೇಯಿಸಿ ಊಟ ಮಾಡುತ್ತಿದ್ದವರ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ, ಇಬ್ಬರು ಅರೆಸ್ಟ್

110920 Forest Department Raid On Deer Hunters 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020 ಜಿಂಕೆ ಬೇಟೆಯಾಡಿ ಅಡುಗೆ ಮಾಡಿ ಊಟ ಮಾಡುತ್ತಿರುವಾಗ ಅರಣ್ಯಾಧಿಕಾರಿಗಳು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿರುವ ಘಟನೆ ತ್ಯಾವರೆಕೊಪ್ಪದಲ್ಲಿ ನಡೆದಿದೆ. ತ್ಯಾವರೆಕೊಪ್ಪದ ಉಮೇಶ್(೫೨) ಹಾಗೂ ವಿರೂಪಿನಕೊಪ್ಪದ ಈಶ್ವರ್(೩೦) ಬಂಧಿತ ಆರೋಪಿಗಳು. ವಿರೂಪಿನಕೊಪ್ಪದ ಏಳುಮಲೈ ಹಾಗೂ ಗೋವಿಂದ ಸ್ವಾಮಿ ಎಂಬ ಇಬ್ಬರು ಪರಾರಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಶಂಕರ ವಲಯ ಅರಣ್ಯಾಧಿಕಾರಿಳ ತಂಡ ವಿರೂಪಿನಕೊಪ್ಪದ ಮನೆ ಮೇಲೆ ದಾಳಿ ನಡೆಸಿದಾಗ ಜಿಂಕೆಯ ಹಸಿ ಮಾಂಸ ಹಾಗೂ ಬೇಯಿಸಿದ … Read more

ಆಗುಂಬೆ ಘಾಟಿಯಲ್ಲಿ ಎಲ್ಲ ವಾಹನ ಸಂಚಾರಕ್ಕೆ ಅನುಮತಿ, ಮಳೆ ಬಂದರೆ ಪರ್ಯಾಯ ಮಾರ್ಗ, ಯಾವುದದು?

Agumbe Ghat 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಸೆಪ್ಟಂಬರ್ 2020 ಆಗುಂಬೆಯಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ. ಜೋರು ಮಳೆಯಾಗುತ್ತಿದ್ದರಿಂದ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಜೋರು ಮಳೆ ಹಿನ್ನೆಲೆ ತೀರ್ಥಹಳ್ಳಿ – ಉಡುಪಿ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರಕ್ಕೆ ನಿರ್ಬಂಧಿಸಲಾಗಿತ್ತು. ಈಗ ನಿರ್ಬಂಧ ತೆರವು ಮಾಡಲಾಗಿದೆ. 12 ಟನ್‍ಗಿಂತಲು ಹೆಚ್ಚು ಭಾರದ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಸೂಚಿಸಲಾಗಿತ್ತು. ಜೂ.15 ರಿಂದ … Read more

ತಾಲೂಕು ಪಂಚಾಯಿತಿ ಸಭೆಯಲ್ಲಿ ಉಪಾಧ್ಯಕ್ಷರಿಂದಲೇ ಧರಣಿ, ಕಾರಣವೇನು?

SORABA MAP GRAPHICS 1

ಶಿವಮೊಗ್ಗ ಲೈವ್.ಕಾಂ | SORABA NEWS | 28 ಆಗಸ್ಟ್ 2020 ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಉಪಾಧ್ಯಕ್ಷರೆ ಧರಣಿ ನಡೆಸಿದ್ದಾರೆ. ಸಭೆಯ ವೇದಿಕೆ ಮುಂಭಾಗ ಸದಸ್ಯರೊಬ್ಬರ ಜೊತೆಗೆ ತಾಲೂಕು ಉಪಾಧ್ಯಕ್ಷರು ಧರಣಿ ನಡೆಸಿ, ಬೇಡಿಕೆ ಮುಂದಿಟ್ಟಿದ್ದಾರೆ. ಉಪಾಧ್ಯಕ್ಷರ ಧರಣಿಗೆ ಕಾರಣವೇನು? ಆನವಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಘಟಕ ನಿರ್ಮಿಸಲು ಉದ್ದೇಶಿಸಲಾಗಿತ್ತು. ಜನರು ವಿರೋಧ ವ್ಯಕ್ತಪಡಿಸಿದ್ದರಿಂದ ಸಾರ್ವಜನಿಕ ಸ್ಥಳದಲ್ಲಿ ಘಟಕ ಸ್ಥಾಪಿಸಿದಂತೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಆಗಸ್ಟ್ 25ರಂದು ಪೊಲೀಸ್ … Read more

ಬೈಕ್‌ನಲ್ಲಿ ತೆರಳುತ್ತಿದ್ದ ಶಿಕ್ಷಕಿಯನ್ನು ಅಡ್ಡಗಟ್ಟಿ ಐದು ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು

ಶಿವಮೊಗ್ಗ ಲೈವ್.ಕಾಂ | HOSANAGARA NEWS | 26 ಆಗಸ್ಟ್ 2020 ಬೈಕ್‍ನಲ್ಲಿ ತೆರಳುತ್ತಿದ್ದ ಶಿಕ್ಷಕಿಯೊಬ್ಬರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಹೊಸನಗರ ತಾಲೂಕು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ಸುಮಾರು ಐದು ಲಕ್ಷ ಮೌಲ್ಯದ ಚಿನ್ನಾಭರಣವನ್ನು ದುಷ್ಕರ್ಮಿಗಳು ದೋಚಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹೇಗಾಯ್ತು ಘಟನೆ? ಆರೋಡಿ ಕೊಡಸೆ ಸರ್ಕಾರಿ ಶಾಲೆ ಶಿಕ್ಷಕಿ ಮಂಜುಳಾ, ತಮ್ಮ ಬೈಕ್‍ನಲ್ಲಿ ತೆರಳುವಾಗ ಮೂವರು ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ. ಆರೋಡಿಯಿಂದ ಸಂಸೆ ಕಡೆಗೆ ತೆರಳುತ್ತಿದ್ದಾಗ … Read more

ಸಿಗಂದೂರು ಚೌಡೇಶ್ವರಿ ದೇವಸ್ಥಾನವನ್ನು ಸರ್ಕಾರ ವಶಕ್ಕೆ ಪಡೆಯಲಿ, ಸಾಗರದಲ್ಲಿ ಪ್ರತಿಭಟನೆ, ಸರ್ಕಾರಕ್ಕೆ ಆಗ್ರಹ

140820 Dalit Sangarsha Samiti Memorandum about Siganduru Temple 1

ಶಿವಮೊಗ್ಗ ಲೈವ್.ಕಾಂ | SAGARA NEWS | 14 ಆಗಸ್ಟ್ 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನವನ್ನು ಸರ್ಕಾರ ತನ್ನ ವಶಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ಸಾಗರದಲ್ಲಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಉಪ ವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಪರಮೇಶ್ವರ ದೂಗೂರು ನೇತೃತ್ವದಲ್ಲಿ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ದೇವಸ್ಥಾನಕ್ಕೆ ಅಪಾರ ಪ್ರಮಾಣದಲ್ಲಿ ಕಾಣಿಕೆ ಹಣ ಬರುತ್ತಿದೆ. ಈ ಹಣ ದುರುಪಯೋಗ ಆಗಿದೆ. … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕ್ಷೀಣ, ಭದ್ರಾವತಿಯಲ್ಲಿ 0 ಮಿ.ಮೀ, ಎರಡು ತಾಲೂಕಲ್ಲಿ ಒಂದು ಮಿ.ಮೀಗಿಂತಲೂ ಕಡಿಮೆ

Shivamogga-Rain-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಆಗಸ್ಟ್ 2020 ಶಿವಮೊಗ್ಗ ಜಿಲ್ಲೆಯಾದ್ಯಂತ ಭಾನುವಾರದಿಂದ ಮಳೆ ಪ್ರಮಾಣ ತಗ್ಗಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಾದ್ಯಂತ 58.54 ಮಿ.ಮೀ ಮಳೆಯಾಗಿದೆ. ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ? ಶಿವಮೊಗ್ಗ 0.40 ಮಿ.ಮೀ, ಭದ್ರಾವತಿ 0.00 ಮಿ.ಮೀ, ತೀರ್ಥಹಳ್ಳಿ 13.20 ಮಿ.ಮೀ, ಸಾಗರ 2.04 ಮಿ.ಮೀ, ಶಿಕಾರಿಪುರ 0.80 ಮಿ.ಮೀ, ಸೊರಬ 5 ಮಿ.ಮೀ, ಹೊಸನಗರ 29.40 ಮಿ.ಮೀ ಮಳೆಯಾಗಿದೆ. ಮಳೆ ಪ್ರಮಾಣ ಸಂಪೂರ್ಣ ಕುಸಿತ ಜಿಲ್ಲೆಯಾದ್ಯಂತ ಮಳೆ ಸಂಪೂರ್ಣ … Read more

ಮೂರು ದಿನ ಶಿವಮೊಗ್ಗ ತಾಲೂಕು ಆಫೀಸ್ ಬಂದ್, ಸಂಪೂರ್ಣ ಸ್ಯಾನಿಟೈಸೇಷನ್

130720 Taluk office Seal down in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜುಲೈ 2020 ಗ್ರಾಮ ಲೆಕ್ಕಾಧಿಕಾರಿಯೊಬ್ಬರಿಗೆ ಕರೋನ ಪಾಸಿಟಿವ್ ಬಂದ ಹಿನ್ನೆಲೆ ಶಿವಮೊಗ್ಗ ತಾಲೂಕು ಕಚೇರಿಯನ್ನು ಬಂದ್ ಮಾಡಲಾಗಿದೆ. ಕಟ್ಟಡದಲ್ಲಿ ಸಂಪೂರ್ಣ ಸ್ಯಾನಿಟೈಸ್ ಮಾಡಲಾಯಿತು. ಕರೋನ ಸೋಂಕಿತ ಗ್ರಾಮ ಲೆಕ್ಕಾಧಿಕಾರಿ ತಾಲೂಕು ಕಚೇರಿಯಲ್ಲಿ ಓಡಾಡಿದ್ದರು. ಈ ಹಿನ್ನೆಲೆಯಲ್ಲಿ ತಾಲೂಕು ಕಚೆರಿಯನ್ನು ಬಂದ್ ಮಾಡಲಾಗಿದೆ ಎಂದು ತಹಶೀಲ್ದಾರ್ ನಾಗರಾಜ್ ತಿಳಿಸಿದ್ದಾರೆ. ತಾಲೂಕು ಕಚೇರಿ ಕಟ್ಟಡಕ್ಕೆ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಯಿತು. ಒಳ ಮತ್ತು ಹೊರಗೆ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ … Read more

ಆ ಚಾಲಕನಿಗೆ ಕರೋನ ಪಾಸಿಟಿವ್ ಬಾರದಲಿ ಅಂತಾ ದೇವರಲ್ಲಿ ಬೇಡಿಕೊಳ್ತಿದಾರೆ ತೀರ್ಥಹಳ್ಳಿ ಜನ, ಯಾರದು? ಕಾರಣವೇನು?

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 17 ಮೇ 2020 ಆ ಡ್ರೈವರ್‍ ಒಬ್ಬನಿಗೆ ಪಾಸಿಟಿವ್ ಬಾರದಿರಲಿ ಅಂತಾ ಕೊಲ್ಲೂರು ದೇವಿಯಲ್ಲಿ ಪ್ರಾರ್ಥನೆ ಮಾಡ್ತೇನೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೀಗಂತ ಹೇಳಿದ್ದಾರೆ. ತೀರ್ಥಹಳ್ಳಿ ತಾಲೂಕಿನಾದ್ಯಂತ ಬಹುತೇಕ ಎಲ್ಲರದ್ದು ಇದೇ ಅಭಿಪ್ರಾಯ. ‘ಆ ಚಾಲಕ ಊರಿನ ಸುತ್ತಮುತ್ತ 50 ಕಿ.ಮೀ ರೇಡಿಯಸ್‍ನಲ್ಲಿ ಹಲವು ಕಡೆಗೆ ಓಡಾಡಿದ್ದಾನೆ. ಹಲವರನ್ನು ಭೇಟಯಾಗಿದ್ದಾನೆ. ಮದುವೆಗು ಹೋಗಿದ್ದಾನೆ. ಕ್ರಿಕೆಟ್ ಆಡಿದ್ದಾನೆ’ ಎಂದು ಶಾಸಕ ಆರಗ ಜ್ಞಾನೇಂದ್ರ ಅತಂಕದಿಂದಲೆ ಮಾಧ್ಯಮಗಳಿಗೆ … Read more