ಜಿಂಕೆ ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು
ಸೊರಬ: ಆಹಾರ ಅರಸಿಕೊಂಡು ಕಾಡಿನಿಂದ ನಾಡಿಗೆ ಬಂದ ಜಿಂಕೆಯನ್ನು (Deer) ಗ್ರಾಮಸ್ಥರು ರಕ್ಷಿಸಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದ ಘಟನೆ ತಾಲೂಕಿನ ತವನಂದಿ ಗ್ರಾಮದಲ್ಲಿ ನಡೆದಿದೆ. ಸುಮಾರು ನಾಲ್ಕು ವರ್ಷದ ಹೆಣ್ಣು ಜಿಂಕೆಯೊಂದು ಆಹಾರ, ನೀರು ಅರಸಿ ಗ್ರಾಮದತ್ತ ಮುಖ ಮಾಡಿತ್ತು. ಅಷ್ಟರಲ್ಲಿಯೇ ನಾಯಿಗಳ ಹಿಂಡು ಜಿಂಕೆಯ ಮೇಲೆ ದಾಳಿ ಮಾಡಲು ಬೆನ್ನತ್ತಿದ್ದವು. ಕೂಡಲೇ ಗ್ರಾಮಸ್ಥರು, ನಾಯಿಗಳನ್ನು ಓಡಿಸಿ, ಜಿಂಕೆಯನ್ನು ರಕ್ಷಿಸಿದ್ದಾರೆ. ಘಟನೆ ಕುರಿತು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ … Read more