ಶಿವಮೊಗ್ಗ ಹೊಸಮನೆಯಲ್ಲಿ ಮೂರು ದಿನ ಕರೋನ ಟೆಸ್ಟಿಂಗ್ ಶಿಬಿರ, ಇವತ್ತಿಂದಲೇ ತಪಾಸಣೆ ಶುರು
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2020 ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಮೂರು ದಿನದ ಕರೋನ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಬಡಾವಣೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿರುವುದರಿಂದ ತಪಾಸಣಾ ಶಿಬಿರ ಮಾಡಲಾಗುತ್ತಿದೆ. ಮಹಾನಗರ ಪಾಲಿಕೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಈ ಶಿಬಿರ ಆಯೋಜಿಸಲಾಗಿದೆ. ಹೊಸಮನೆ ಬಡಾವಣೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಕರೋನ ಟೆಸ್ಟ್ ಮಾಡಲಾಗುತ್ತದೆ. ಕೆಮ್ಮು, ಶೀತ, ಜ್ವರದ ಲಕ್ಷಣಗಳು … Read more