ಮದುವೆ ಸಮಾರಂಭದಿಂದ ಮನೆಗೆ ಹಿಂತಿರುಗಿದ ಕುಟುಂಬಕ್ಕೆ ಕಾದಿತ್ತು ಶಾಕ್, ಆಗಿದ್ದೇನು?
ಶಿವಮೊಗ್ಗ: ಕುಟುಂಬದವರೆಲ್ಲ ಮದುವೆ ಸಮಾರಂಭಕ್ಕೆ (Marriage) ತೆರಳಿದ್ದಾಗ ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಅಣ್ಣಾನಗರದ ನಾಜೀಮಾ ಬಾನು ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ನಾಜೀಮಾ ಬಾನು ಅವರು ಸಂಬಂಧಿಯ ಮದುವೆ ಸಮಾರಂಭಕ್ಕೆ ತೆರಳಿದ್ದರು. ಮರುದಿನ ಮನೆಗೆ ಮರಳಿದಾಗ ಬಾಗಿಲಿನ ಬೀಗ ಮುರಿಯಲಾಗಿತ್ತು. ಒಳಗೆ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದವು. ಪರಿಶೀಲಿಸಿದಾಗ 1.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವುದು ಗೊತ್ತಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಶಿವಮೊಗ್ಗ – … Read more