ಕೋಣಂದೂರು ಬಳಿ ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ
ಕೋಣಂದೂರು: ಸಮೀಪದ ಹೊಸಕೇರಿ ನಿವಾಸಿ ನಾಗರಾಜ (52) ಡೆತ್ ನೋಟ್ ಬರೆದಿಟ್ಟು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಟ್ ಫಂಡ್ ವ್ಯವಹಾರಕ್ಕೆ ಸಂಬಂಧಿಸಿದಂತೆ ತನ್ನ ಮನೆಯ ದಾಖಲೆ ಪತ್ರಗಳನ್ನು ಸಂಬಂಧಿಕರೊಬ್ಬರಿಗೆ ಕೊಟ್ಟು ಜಾಮೀನಿಗೆ ಸಹಿ ಮಾಡಿದ್ದರು. ಇದನ್ನೂ ಓದಿ » ಅಂಜನಾಪುರ ಜಲಾಶಯದ ಹಿನ್ನೀರಿಗೆ ಹಾರಿದ ರೈತ ಈ ಕಾರಣಕ್ಕೆ ಚಿಟ್ ಫಂಡ್‌ನವರು ಕಿರುಕುಳ ನೀಡಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.