ಶಿವಮೊಗ್ಗ ಡಿಸಿ ಗ್ರಾಮ ವಾಸ್ತವ್ಯಕ್ಕೆ ದಿನಾಂಕ, ಹಳ್ಳಿ ನಿಗದಿ, ಈ ಭಾರಿ ವಾಸ್ತವ್ಯ ಎಲ್ಲಿ?

Shimoga Dc Dr.selvamani

SHIVAMOGGA LIVE NEWS | VILLAGE | 16 ಮೇ 2022 ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಮೇ 21ರಂದು ಬೆಳ್ಳೂರು ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಡಿಯಲ್ಲಿ ಡಿಸಿ ವಾಸ್ತವ್ಯಕ್ಕೆ ಗ್ರಾಮ ನಿಗದಿಪಡಿಸಲಾಗಿದೆ. ಮೇ 21ರಂದು ಬೆಳಗ್ಗೆ 11 ಗಂಟೆಗೆ ಹೊಸನಗರ ತಾಲೂಕು ಕೆರೆಹಳ್ಳಿ ಹೋಬಳಿಯ ಬೆಳ್ಳೂರು ಗ್ರಾಮ (VILLAGE) ಪಂಚಾಯಿತಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಭೇಟಿ ನೀಡಲಿದ್ದಾರೆ. ಕಂದಾಯ ಇಲಾಖೆ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸಾರ್ವಜನಿಕರನ್ನು … Read more

ಶಿವಮೊಗ್ಗದಲ್ಲಿ ಕೆಜಿಎಫ್ 2 ಸಿನಿಮಾ ನೋಡಿ ಚಿತ್ರಮಂದಿರದಿಂದ ಹೊರ ಬಂದಾಗ ಕಾದಿತ್ತು ಶಾಕ್

bike theft reference image

SHIVAMOGGA LIVE NEWS | BIKE THEFT | 16 ಮೇ 2022 ಪತ್ನಿ, ಮಗುವಿನೊಂದಿಗೆ ಕೆಜಿಎಫ್ 2 ಸಿನಿಮಾ ನೋಡಿ ಹೊರಗೆ ಬರುವಷ್ಟರಲ್ಲಿ ವ್ಯಕ್ತಿಯೊಬ್ಬರ ಬೈಕ್ ಕಳ್ಳತನವಾಗಿದೆ. ತ್ಯಾಜ್ಯವಳ್ಳಿಯ ದರ್ಶನ್ ಎಂಬುವವರಿಗೆ ಸೇರಿದ ಪ್ಯಾಷನ್ ಪ್ರೋ ಬೈಕ್ ಕಳ್ಳತನವಾಗಿದೆ. ಶಿವಮೊಗ್ಗದ ಮಲ್ಲಿಕಾರ್ಜುನ ಚಿತ್ರಮಂದಿರದ ಪಾರ್ಕಿಂಗ್ ಸ್ಥಳದಲ್ಲಿ ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದರ್ಶನ್ ತಮ್ಮ ಪತ್ನಿ ಮತ್ತು ಮಗುವಿನೊಂದಿಗೆ ಏಪ್ರಿಲ್ 27ರಂದು ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ ಸಿನಿಮಾ ನೋಡಲು ಬಂದಿದ್ದರು. ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ನಿಲ್ಲಿಸಿ … Read more

ದುರ್ಗಿಗುಡಿಯ ಕಿರು ರಸ್ತೆಯಲ್ಲಿ ಟ್ರಾಫಿಕ್ ಕಿರಿಕಿರಿ, ಫೇಸ್ ಬುಕ್ಕಲ್ಲಿ ಆಕ್ರೋಶ, ಏನಿದು ಸಮಸ್ಯೆ?

Traffic-Problem-in-Shimoga-Durgigudi

SHIVAMOGGA LIVE NEWS | TRAFFIC | 13 ಮೇ 2022 ಒನ್ ವೇ ರಸ್ತೆಯಲ್ಲಿ ಟೂ ವೇ ಸಂಚಾರ. ವಾಹನ ಸವಾರರಿಗೆ ತಪ್ಪದ ಕಿರಿಕಿರಿ. ಸಂಚಾರಿ ಪೊಲೀಸರ ನಿರ್ಲಕ್ಷ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಬೇಸರ. ಶಿವಮೊಗ್ಗದ ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿ ವಾಹನಗಳಿಗೆ ಒನ್ ವೇ ಸಂಚಾರಕ್ಕೆ ಮಾತ್ರ ಅವಕಾಶವಿದೆ. ಸಂಬಂಧ ಪೊಲೀಸ್ ಇಲಾಖೆ ನಿಯಮವನ್ನು ಹೊರಡಿಸಿದ್ದು, ಬ್ಯಾನರ್ ಕೂಡ ಅಳವಡಿಸಲಾಗಿದೆ. ಆದರೆ ಒನ್ ವೇ ನಿಯಮ ಪಾಲನೆ ಆಗುತ್ತಿಲ್ಲ. ಇದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲೂ ಚರ್ಚೆಯಾಗುತ್ತಿದೆ. … Read more

ಮಾಜಿ ಸಚಿವ ಕಿಮ್ಮನೆ ರತ್ನಾಕರ್’ಗೆ ಮಾಜಿ ಸಿಎಂ ಸಿದ್ದರಾಮಯ್ಯ ಫೋನ್ ಕರೆ

Kimmane-Rathnakar-at-Janadwani-Protest

SHIVAMOGGA LIVE NEWS | PROTEST| 10 ಮೇ 2022 ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ನಡೆದ ಪಾದಯಾತ್ರೆ ಇವತ್ತು ಶಿವಮೊಗ್ಗ ತಲುಪಿತು. ಐದು ದಿನ ನಿರಂತರ ಪಾದಯಾತ್ರೆ ನಡೆಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಜನಧ್ವನಿ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡರು. ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಮ್ಮನೆ ರತ್ನಾಕರ್ ಅವರಿಗೆ ದೂರವಾಣಿ ಕರೆ ಮಾಡಿ ಚರ್ಚೆ ನಡೆಸಿದ್ದಾರೆ. ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯ, ಪಿಎಸ್ಐ ನೇಮಕಾತಿ ಹಗರಣ, ಗೃಹ ಸಚಿವರ ಅಸಮರ್ಥತೆ ಖಂಡಿಸಿ … Read more

‘ವಿಧಾನಸಭೆ ಚುನಾವಣೆಗೆ ನಾನೂ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ’

Yogendra-Guruji-visit-KG-Prashanth-House-in-Sagara

SHIVAMOGGA LIVE NEWS | CANDIDATE | 10 ಮೇ 2022 ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಂಸದ ಕೆ.ಜಿ.ಶಿವಪ್ಪ ಅವರ ಪುತ್ರ, ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಜಿ.ಪ್ರಶಾಂತ್ ಹೇಳಿದರು. ಜೋಸೆಫ್ ನಗರದ ನಿವಾಸಕ್ಕೆ ಭೇಟಿ ನೀಡಿದ್ದ ಸಾರಗನಜಡ್ಡು ಶ್ರೀ ಕಾರ್ತಿಕೇಯ ಪೀಠದ ಯೋಗೇಂದ್ರ ಶ್ರೀಗಳನ್ನು ಸನ್ಮಾನಿಸಿ ಮಾತನಾಡಿದ ಪ್ರಶಾಂತ್ ಅವರು, ಅನೇಕ ಸಾಮಾಜಿಕ ಕೆಲಸಗಳಲ್ಲಿ ನಾನು ತೊಡಗಿಸಿಕೊಂಡಿದ್ದೇನೆ. ರಾಜಕೀಯ ಸ್ಥಾನಮಾನ … Read more

ಶಿವಮೊಗ್ಗ ನಗರದಲ್ಲಿ ಇವತ್ತು ಜನದನಿ ರಾಲಿ, ಭಾಗವಹಿಸಲಿದ್ದಾರೆ ಡಿಕೆಶಿ

DK-Shivakumar-In-Shimoga-Helipad

SHIVAMOGGA LIVE NEWS | CONGRESS | 10 ಮೇ 2022 ಕೇಂದ್ರ ಹಾಗೂ ರಾಜ್ಯ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ ಖಂಡಿಸಿ ಇವತ್ತು ಶಿವಮೊಗ್ಗ ನಗರದಲ್ಲಿ ಜನ ದನಿ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಸೇರಿ ರಾಜ್ಯ ಮಟ್ಟದ ಅನೇಕ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್‌.ಎಸ್‌. ಸುಂದರೇಶ್ ತಿಳಿಸಿದರು. ಇವತ್ತು ಬೆಳಗ್ಗೆ 10.30ಕ್ಕೆ ಅಶೋಕ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. … Read more

ಶಿವಮೊಗ್ಗ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಚಾಲಕನ ಕಿವಿಗೆ ಹೊಡೆದು, ಕೈ ತಿರುಗಿಸಿ ಹಲ್ಲೆ

KSRTC-Bus-After-Curfew-In-Shimoga-city

SHIVAMOGGA LIVE NEWS |  ASSAULT | 06 ಮೇ 2022 ಕೆಎಸ್ಆರ್​ಟಿಸಿ ಬಸ್ ಒಂದನ್ನು ಹಿಂಬಾಲಿಸಿಕೊಂಡು ಬಂದ ಇಬ್ಬರು ಬಸ್ ನಿಲ್ದಾಣದಲ್ಲಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಕಿವಿಗೆ ಹೊಡೆದು, ಕೈ ತಿರುಗಿಸಿದ್ದಾರೆ. ಚಾಲಕ ಸೋಮಲಿಂಗಪ್ಪ ಹನುಮಂತಪ್ಪ ಯಾದವ್ ಹಲ್ಲೆಗೊಳಗಾದವರು. ಇರ್ಷದ್ ಅಹಮದ್ ಮತ್ತು ಆತನ ಸಹಚರ ಕೃತ್ಯ ಎಸಗಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ? ಸೋಮಲಿಂಗಪ್ಪ ಅವರು ಮೈಸೂರು – ಶಿವಮೊಗ್ಗ- ಹೊಸಪೇಟೆ ಮಾರ್ಗದ ಕೆಎಸ್ಆರ್​ಟಿಸಿ ಬಸ್ ಚಾಲಕರಾಗಿದ್ದಾರೆ. ಶಿವಮೊಗ್ಗ ಬೈಪಾಸ್ … Read more

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿಗೆ ಕೊಲೆ ಬೆದರಿಕೆ, ಏನಿದು ಪ್ರಕರಣ?

Dr-Rajanandini-Kagodu-Sagara.

SHIVAMOGGA LIVE NEWS | THREAT | 04 ಮೇ 2022 ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ.ರಾಜನಂದಿನಿ ಅವರಿಗೆ ಕೊಲೆ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗರ ತಾಲೂಕು ತ್ಯಾಗರ್ತಿ ಗ್ರಾಮದ ಮಾರಿಗುಡಿ ಸಮೀಪ ಡಾ.ರಾಜನಂದಿನಿ ಅವರ ಕಾರು ಅಡ್ಡಗಟ್ಟಿ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಅವರ ಕಾರು ಚಾಲಕ ಪ್ರಕಾಶ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆದರಿಕೆ ಒಡ್ಡಿದ್ದು ಯಾರು? ಕಾಗೋಡು ತಿಮ್ಮಪ್ಪ ಫೌಂಡೇಶನ್ … Read more

ಮಂಗನ ಕಾಯಿಲೆಗೆ ತುತ್ತಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯ ಸಾವು, ಏನಿದು ಮಂಗನ ಕಾಯಿಲೆ? ಲಕ್ಷಣವೇನು?

Grama-Panchayat-Member-Dies-of-KFD-in-Aralagodu-Village

SHIVAMOGGA LIVE NEWS | MONKEY FEVER | 03 ಮೇ 2022 ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತೆ ಮಂಗನ ಕಾಯಿಲೆ ಆತಂಕ ಶುರುವಾಗಿದೆ. KFD ಸೋಂಕಿಗೆ ತುತ್ತಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಬಲಿಯಾಗಿದ್ದಾರೆ. ಅರಳಗೋಡು ಗ್ರಾಮ ಪಂಚಾಯಿತಿ ಸದಸ್ಯ ರಾಮಸ್ವಾಮಿ (55) ಮೃತರು. ಏಪ್ರಿಲ್ 24ರಂದು ರಾಮಸ್ವಾಮಿ ಅವರಿಗೆ ಜ್ವರ ಬಂದಿತ್ತು. ಈ ಹಿನ್ನೆಲೆ ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಾಮಸ್ವಾಮಿ ಅವರಿಗೆ ಕೆಎಫ್’ಡಿ (ಮಂಗನ ಕಾಯಿಲೆ) ಸೋಂಕು ತಗುಲಿರುವುದು ದೃಢವಾಗಿತ್ತು. ಜ್ವರ … Read more

ಶಿವಮೊಗ್ಗ KSRTC ಬಸ್ ನಿಲ್ದಾಣ ಹಿಂಭಾಗ ಯುವಕ ಅರೆಸ್ಟ್

Arrest News Graphics

SHIVAMOGGA LIVE NEWS | CRIME | 03 ಮೇ 2022 ಶಿವಮೊಗ್ಗದ KSRTC ಬಸ್ ನಿಲ್ದಾಣದ ಹಿಂಭಾಗ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ಖಚಿತವಾದ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ. ರಾಗಿಗುಡ್ಡ ನಿವಾಸಿ ಮೊಹಮದ್ ಅವೀಜ್ (19) ಬಂಧಿತ. ಮಟನ್ ಸ್ಟಾಲ್’ನಲ್ಲಿ ಕೆಲಸ ಮಾಡುವ ಈತ ಶಿವಮೊಗ್ಗದ KSRTC ಬಸ್ ನಿಲ್ದಾಣ ಹಿಂಭಾಗ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಗಸ್ತು ತಿರುಗುತ್ತಿದ್ದ ಪೊಲೀಸರು ಇದನ್ನು ಗಮನಿಸಿ … Read more