ಅಧಿಕಾರಿಗಳು ಕೆಲಸ ಮಾಡಿಕೊಡ್ತಿಲ್ವಾ? ಶಿವಮೊಗ್ಗದಲ್ಲಿ ಇವತ್ತು ಇಡೀ ದಿನ ಉಪ ಲೋಕಾಯುಕ್ತರಿಗೆ ದೂರು ಕೊಡಬಹುದು
ಶಿವಮೊಗ್ಗ : ಉಪ ಲೋಕಾಯುಕ್ತ ನ್ಯಾ. ಕೆ.ಎನ್.ಫಣೀಂದ್ರ ಮಾ.18 ರಿಂದ 21ರವರೆಗೆ ಶಿವಮೊಗ್ಗ ಸಿಟಿ ಪ್ರವಾಸ (Tour) ಕೈಗೊಂಡಿದ್ದಾರೆ. ಈ ಅವಧಿಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ವಿವಿಧ ಸಭೆ, ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿವಿಧೆಡೆ ದಿಢೀರ್ ಭೇಟಿಯನ್ನೂ ನೀಡಲಿದ್ದಾರೆ. ಮಾ.19ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ ಅಥವಾ ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬವಾಗಿದ್ದಲ್ಲಿ, ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ … Read more