ಶಿವಮೊಗ್ಗಕ್ಕೆ ಬಿಳಿ ಹುಲಿ ಆಗಮನ, ತ್ಯಾವರೆಕೊಪ್ಪದಲ್ಲಿ 6 ನೂತನ ಸದಸ್ಯರ ದರ್ಶನ, ಇನ್ನು ಯಾವೆಲ್ಲ ಪ್ರಾಣಿ ಬಂದಿವೆ?

031025-White-Tiger-in-Shimoga-Tyavarekoppa-Lion-and-Tiger-Safari.webp

ಶಿವಮೊಗ್ಗ: ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ (Zoo) ನೂತನ ಸದಸ್ಯರ ಆಗಮನವಾಗಿದೆ. ಶಿವಮೊಗ್ಗಕ್ಕೆ ಆಗಮಿಸಿದಾಗಿನಿಂದ ಕ್ವಾರಂಟೈನ್‌ನಲ್ಲಿದ್ದ ಪ್ರಾಣಿಗಳು ಈಗ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೃಗಾಲಯದ ಅಧಿಕಾರಿಗಳು ಫೋಟೊ ರಿಲೀಸ್‌ ಮಾಡಿದ್ದಾರೆ. ಇದೇ ಮೊದಲ ಬಾರಿ ಶಿವಮೊಗ್ಗದ ಮೃಗಾಲಯಕ್ಕೆ ಬಿಳಿ ಹುಲಿ ಆಗಮನವಾಗಿದೆ. ಇನ್ನು, ಇದೇ ಮೊದಲ ಬಾರಿ ಹೊರ ರಾಜ್ಯದಿಂದ ಹುಲಿ, ಸಿಂಹಗಳನ್ನು ತರಿಸಲಾಗಿದೆ. ಯಾವೆಲ್ಲ ಪ್ರಾಣಿಗಳು ಬಂದಿವೆ? ಇಲ್ಲಿದೆ ಫೋಟೊ ಮಾಹಿತಿ » ಬಿಳಿ ಹುಲಿ ಶಿವಮೊಗ್ಗ ಮೃಗಾಲಯಕ್ಕೆ ಇದೆ ಮೊದಲ ಬಾರಿ ಬಿಳಿ … Read more

ಪ್ರವಾಸಿಗರಿಗೆ ಗುಡ್‌ ನ್ಯೂಸ್‌, ತ್ಯಾವರೆಕೊಪ್ಪ ಮೃಗಾಲಯಕ್ಕೆ ಹೊಸ ಪ್ರಾಣಿಗಳು, ಆಗಮನದ ದಿನಾಂಕ ಫಿಕ್ಸ್‌

Lion-Tiger-Safari-Tyavrekoppa-in-Shimoga.

ಶಿವಮೊಗ್ಗ: ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ನೂತನ ಅತಿಥಿಗಳ ಆಗಮನಕ್ಕೆ ದಿನಾಂಕ ನಿಗದಿಯಾಗಿದೆ. ದಸರಾ ಹಬ್ಬದ ಸಂದರ್ಭ ಇಲ್ಲಿನ ಮೃಗಾಲಯಕ್ಕೆ ಇಂದೋರ್‌ ಮತ್ತು ಔರಂಗಾಬಾದ್‌ನಿಂದ ಪ್ರಾಣಿಗಳು (Animals) ಆಗಮಿಸಲಿವೆ. ಮೃಗಾಲಯಕ್ಕೆ ಅಧಿಕಾರಿಗಳು ಭೇಟಿ ಈ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ ಸಿಇಒ ಅಮರಾಕ್ಷರ, ಇಂದೋರ್‌ ಮತ್ತು ಔರಂಗಾಬಾದ್‌ ಮೃಗಾಲಯದ ಅಧಿಕಾರಿಗಳು ಇಂದು ತ್ಯಾವರೆಕೊಪ್ಪದ ಮೃಗಾಲಯಕ್ಕೆ ಭೇಟಿ ನೀಡಿದ್ದರು. ಪ್ರಾಣಿಗಳ ವಿನಿಮಯಕ್ಕೆ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನು, ಶಿವಮೊಗ್ಗ ಮೃಗಾಲಯದ … Read more

ಸಕ್ರೆಬೈಲು ಆನೆಗಳಿಗೆ ಶಿವಮೊಗ್ಗ ದಸರಾಕ್ಕೆ ಆಹ್ವಾನ, ಯಾವೆಲ್ಲ ಆನೆಗಳು ಭಾಗವಹಿಸಲಿವೆ? ಇಲ್ಲಿದೆ ಡಿಟೇಲ್ಸ್‌

Sakrebyle-Elephant-welcomed-for-Shimoga-Dasara

ಶಿವಮೊಗ್ಗ ದಸರಾ: ನಾಡ ದೇವಿ ಚಾಮುಂಡೇಶ್ವರಿಯ ವೈಭವದ ಅಂಬಾರಿ ಮೆರವಣಿಗೆಗೆ ಈ ಬಾರಿಯು ಸಕ್ರೆಬೈಲು ಬಿಡಾರದ ಮೂರು ಆನೆಗಳು ಆಗಮಿಸಲಿವೆ. ಇವತ್ತು ಆನೆಗಳಿಗೆ ಪೂಜೆ ಸಲ್ಲಿಸಿ ಆಹ್ವಾನ ನೀಡಲಾಯಿತು. ಶಾಸಕ ಎಸ್‌.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು, ಮಾಜಿ ಕಾರ್ಪೊರೇಟರ್‌ಗಳು ಸಕ್ರೆಬೈಲು ಬಿಡಾರಕ್ಕೆ ತೆರಳಿ ಆನೆಗಳಿಗೆ ಪೂಜೆ ಸಲ್ಲಿಸಿ ಆಹ್ವಾನ ನೀಡಿದರು. ಸಾಗರ ನೇತೃತ್ವದಲ್ಲಿ ಮೂರು ಆನೆಗಳು ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌.ಎನ್.ಚನ್ನಬಸಪ್ಪ, ಈ ಬಾರಿಯು ಮೂರು ಆನೆಗಳು ಆಗಮಿಸಲಿವೆ. ಸಾಗರ ಆನೆ ಶ್ರೀ ಚಾಮುಂಡೇಶ್ವರಿ … Read more

ಶಿವಮೊಗ್ಗ ದಸರಾ, ಯಾವೆಲ್ಲ ಕಾರ್ಯಕ್ರಮ ಯಾವಾಗ ಉದ್ಘಾಟನೆ ಆಗಲಿದೆ? ಇಲ್ಲಿದೆ ಲಿಸ್ಟ್‌

021024 shimoga dasara news general image

ಶಿವಮೊಗ್ಗ ದಸರಾ: ನಾಡಹಬ್ಬ ದಸರಾದಲ್ಲಿ (DASARA) ಈ ಬಾರಿ ವಿವಿಧ ವೈದ್ಯಮಯ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಯಾವ್ಯಾವ ದಿನ ಏನೆಲ್ಲ ಕಾರ್ಯಕ್ರಮ ಉದ್ಘಾಟನೆ ಆಗಲಿದೆ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌. » 22 ಸೆಪ್ಟೆಂಬರ್‌ 2025 ಬೆಳಗ್ಗೆ 9ಕ್ಕೆ – ಕುವೆಂಪು ರಂಗಮಂದಿರ ಮಕ್ಕಳ ದಸರಾ, ಕ್ರೀಡಾಕೂಟ ರಾಷ್ಟ್ರೀಯ ಸ್ಕೇಟಿಂಗ್‌ ವಿಜೇತರಾದ ಆದ್ವಿಕಾ ನಾಯರ್‌, ಹಿತ ಪ್ರವೀಣ್‌ ಅವರಿಂದ ಚಾಲನೆ ಸಂಜೆ 6ಕ್ಕೆ – ಕುವೆಂಪು ರಂಗಮಂದಿರ ಯುವ ದಸರಾದಲ್ಲಿ ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆ ಸಚಿವ ಮಧು ಬಂಗಾರಪ್ಪ ಅವರಿಂದ … Read more

ಲಿಂಗನಮಕ್ಕಿ ಡ್ಯಾಮ್‌ ಎಲ್ಲ ಗೇಟ್‌ ಓಪನ್‌, ಬದಲಾಯ್ತು ಜೋಗದ ಲುಕ್‌, ಎಷ್ಟು ನೀರು ಹೊರ ಬಿಡಲಾಗ್ತಿದೆ?

linganamakki-dam-gates-opened-and-Jog-falls.

ಸಾಗರ: ಲಿಂಗನಮಕ್ಕಿ ಜಲಾಶಯದ (Linganamakki Dam) ಎಲ್ಲ ಗೇಟುಗಳನ್ನು ಪುನಃ ಮೇಲೆತ್ತಲಾಗಿದೆ. ಇದರಿಂದ ಶರಾವತಿ ನದಿಯಲ್ಲಿ ಪುನಃ ನೀರಿನ ಹರಿವು ಹೆಚ್ಚಳವಾಗಿದೆ. ಜೋಗ ಜಲಪಾತವು (Jog Falls) ಮೈ ದುಂಬಿ ಹರಿಯುತ್ತಿದೆ. ಇವತ್ತು ಒಳ, ಹೊರ ಹರಿವು ಎಷ್ಟಿದೆ? ಜಲಾನಯನ ಪ್ರದೇಶದಲ್ಲಿ ಕಳೆದ ಎರಡು ದಿನದಿಂದ ನಿರಂತರ ಮಳೆಯಾಗುತ್ತಿದೆ. ಅದ್ದರಿಂದ ಒಳ ಹರಿವು ಹೆಚ್ಚಳವಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು 47,232 ಕ್ಯೂಸೆಕ್‌ ಒಳ ಹರಿವು ಇದೆ. ಈಗಾಗಲೆ ಜಲಾಶಯ ಭರ್ತಿ ಆಗಿರುವುದರಿಂದ ಎಲ್ಲ ರೇಡಿಯಲ್‌ ಗೇಟುಗಳನ್ನು ಮೇಲೆತ್ತಿ … Read more

ಚಂದ್ರಗುತ್ತಿ ಅಭಿವೃದ್ಧಿಗೆ ಯೋಜನೆ ಸಿದ್ಧ, ಬಜೆಟ್‌ನಲ್ಲಿ ಮಹತ್ವದ ನಿರ್ಧಾರ ಪ್ರಕಟ, ಏನದು?

Chandragutti-Temple-Soraba.

ಬೆಂಗಳೂರು : ರೇಣುಕಾಂಬ ದೇವಸ್ಥಾನವಿರುವ ಸೊರಬ ತಾಲೂಕು ಚಂದ್ರಗುತ್ತಿಗೆ ಗ್ರಾಮದ ಅಭಿವೃದ್ಧಿಗೆ (Tourism) ರಾಜ್ಯ ಸರ್ಕಾರ ಮುಂದಡಿ ಇಟ್ಟಿದೆ. ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ, ಚಂದ್ರಗುತ್ತಿ ಗ್ರಾಮವನ್ನು ಧಾರ್ಮಿಕ ಮತ್ತು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸಲು ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗುತ್ತದೆ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ » ಸದ್ಯದಲ್ಲೇ ಶಿವಮೊಗ್ಗ ಕೋರ್ಟ್‌ ಕಲಾಪಗಳು ಯು ಟ್ಯೂಬ್‌ನಲ್ಲಿ ನೇರ ಪ್ರಸಾರ, ಯಾವಾಗ ಶುರು?

ತ್ಯಾವರೆಕೊಪ್ಪ ಮೃಗಾಲಯದ ಮತ್ತೊಂದು ಹುಲಿ ಸಾವು, ಈ ವರ್ಷದಲ್ಲಿ ಎರಡನೇ ಟೈಗರ್‌ ಕೊನೆಯುಸಿರು

tiger-vijay-succumbed-at-Tyavarekoppa

ಶಿವಮೊಗ್ಗ : ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ ಏಕೈಕ ಗಂಡು ಹುಲಿ (Tiger) ವಿಜಯ್‌ ಇಂದು ಕೊನೆಯುಸಿರೆಳೆದಿದೆ ಎಂದು ಹುಲಿ ಮತ್ತು ಸಿಂಹಧಾಮದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಜನಿಸಿದ್ದ ವಿಜಯ್‌ (17), ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದೆ. ಕಳೆದ ಒಂದು ತಿಂಗಳಿಂದ ವಿಜಯ್‌ ನಿಯಮಿತವಾಗಿ ಆಹಾರ ಸೇವಿಸುತ್ತಿರಲಿಲ್ಲ. ಸ್ನಾಯುಗಳಲ್ಲಿ ಸಮಸ್ಯೆ ಉಂಟಾಗಿತ್ತು ಎಂದು ತಿಳಿಸಲಾಗಿದೆ. ಮೃಗಾಲಯದಲ್ಲಿ ಆಕರ್ಷಣೆಯ ಕೇಂದ್ರವಾಗಿತ್ತು ವಿಜಯ್‌ ಹುಲಿ. ಇಡೀ ಜೀವನ ಪ್ರಕೃತಿ ಶಿಕ್ಷಣ ಉದ್ದೇಶಕ್ಕೆ ಮೀಸಲಾಗಿತ್ತು. ವಿಜಯ್‌ ಸಾವಿನಿಂದ ಮೃಗಾಲಯಕ್ಕೆ ದೊಡ್ಡ … Read more

ತ್ಯಾವರೆಕೊಪ್ಪ ಮೃಗಾಲಯಕ್ಕೆ ನಾಲ್ಕು ಹೊಸ ಬಗೆಯ ಪ್ರಾಣಿ, ಪಕ್ಷಿ ಪ್ರಭೇದ

new-animals-to-tyavarekoppa-lion-and-tiger-safari.

SHIMOGA NEWS, 16 NOVEMBER 2024 : ಮೃಗಾಲಯಗಳ ನಡುವೆ ಪ್ರಾಣಿಗಳ (Animals) ವಿನಿಮಯ ಕಾರ್ಯಕ್ರಮದ ಅಡಿ ಐದು ಬಗೆಯ ಹೊಸ ಪ್ರಾಣಿ, ಪಕ್ಷಿಗಳು ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ಸೇರ್ಪಡೆಯಾಗಿವೆ. ಇದರಿಂದ ತ್ಯಾವರೆಕೊಪ್ಪದಲ್ಲಿ ಪ್ರಾಣಿ ಪ್ರಬೇಧಗಳ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ತಿರುವನಂತಪುರದಿಂದ ಶಿವಮೊಗ್ಗಕ್ಕೆ ಪ್ರಾಣಿಗಳು ಪ್ರಾಣಿಗಳ ವಿನಿಮಯ ಕಾರ್ಯಕ್ರಮದ ಅಡಿ ಹೆಚ್ಚುವರಿ ಪ್ರಾಣಿಗಳನ್ನು ವಿನಿಮಯ ಮಾಡಿಕೊಳ್ಳಲು ಅನುಮೋದನೆ ದೊರತಿತ್ತು. ಅದರಂತೆ ತ್ಯಾವರೆಕೊಪ್ಪದ ಮೃಗಾಲಯದಲ್ಲಿ ಹೆಚ್ಚುವರಿಯಾದ ಪ್ರಾಣಿಗಳನ್ನು ಕೇರಳದ ತಿರುವನಂತಪುರದ ಮೃಗಾಲಯಕ್ಕೆ ರವಾನಿಸಲಾಗಿದೆ. ಅಲ್ಲಿಂದ ಹೆಚ್ಚುವರಿ ಪ್ರಾಣಿಗಳನ್ನು … Read more

ಶಿವಮೊಗ್ಗ ಸಿಟಿಯ 15 ಕಿ.ಮೀ ವ್ಯಾಪ್ತಿಯಲ್ಲಿವೆ 10 ಪ್ರಮುಖ ಪಿಕ್ನಿಕ್‌ ತಾಣಗಳು, ಇಲ್ಲಿದೆ ಲಿಸ್ಟ್‌

Shimoga-City-MRS-Drone-Shot

SHIMOGA TOURISM | ಶಿವಮೊಗ್ಗ ಜಿಲ್ಲೆ ಪ್ರವಾಸಿ ತಾಣಗಳ ತವರು. ಶಿವಮೊಗ್ಗ ಸಿಟಿಯ ಹತ್ತದಿನೈದು ಕಿ.ಮೀ ವ್ಯಾಪ್ತಿಯಲ್ಲೇ ಹಲವು ಟೂರಿಸಂ ಸ್ಪಾಟ್‌ಗಳಿವೆ. ಕುಟುಂಬದ ಜೊತೆಗೆ, ಸ್ನೇಹಿತರೊಟ್ಟಿಗೆ ಪಿಕ್ನಿಕ್ ಹೋಗಿ ಬರಲು ಈ ತಾಣಗಳು ಸೂಕ್ತ. ಸದ್ಯ ಶಿವಮೊಗ್ಗ ಸಿಟಿ ಮತ್ತು ಸುತ್ತಮುತ್ತ ಇರುವ ಒನ್‌ ಡೇ ಪಿಕ್ನಿಕ್‌ ಸ್ಪಾಟ್‌ಗಳ ಲಿಸ್ಟ್‌ ಇಲ್ಲಿದೆ. ಇದನ್ನೂ ಓದಿ ⇒ ಶಿವಮೊಗ್ಗ ಲೈವ್‌ನಲ್ಲಿ ಇನ್ಮುಂದೆ ಸುದ್ದಿಯಷ್ಟೇ ಅಲ್ಲ, ಹೊಸ ಕಾಲಂಗಳು ಆರಂಭ, ಏನೆಲ್ಲ ಹೊಸತು ಬರಲಿದೆ?

ಕೊಡಚಾದ್ರಿ ಪ್ರವಾಸಿಗರಿಗೆ ಶಾಕ್‌ ನೀಡಿದ ವನ್ಯಜೀವಿ ವಿಭಾಗ, ಇವತ್ತಿನಿಂದ ಪ್ರವೇಶ ನಿಷೇಧ

Kodachadri-Road-Problem

SHIVAMOGGA LIVE | 30 JULY 2023 NITTURU : ಪ್ರಸಿದ್ಧ ಪ್ರವಾಸಿ ತಾಣ ಮತ್ತು ಶ್ರದ್ಧಾ ಕೇಂದ್ರ ಕೊಡಚಾದ್ರಿಗೆ (Kodachadri) ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ. ಮುಂದಿನ ಆದೇಶದವರೆಗೆ ವಾಹನದಲ್ಲಿ ತೆರಳುವುದು, ಚಾರಣ ಮಾಡುವುದನ್ನು ನಿಷೇಧಿಸಿ ವನ್ಯಜೀವಿ ವಿಭಾಗ ಆದೇಶ ಹೊರಡಿಸಿದೆ. ಕೊಡಚಾದ್ರಿಗೆ ದೊಡ್ಡ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಿದ್ದರು. ವನ್ಯಜೀವಿ ವಿಭಾಗದ ಆದೇಶದಿಂದ ಪ್ರವಾಸಿಗರಿಗೆ ನಿರಾಸೆಯಾಗಿದೆ. ನಿಷೇಧಕ್ಕೆ ಕಾರಣವೇನು? ಭಾರಿ ಮಳೆಯಿಂದಾಗಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕಟ್ಟಿನಹೊಳೆ ಮೂಲಕ ಕೊಡಚಾದ್ರಿಗೆ ತೆರಳುವ ಜೀಪ್‌ ಮುಂತಾದ ವಾಹನಗಳು ಹಾಗೂ … Read more