ದೀಪಾವಳಿ, ಪ್ರವಾಸಿಗರ ಸಂಖ್ಯೆ ಹೆಚ್ಚಳ, ಅ.21ರಂದೂ ಶಿವಮೊಗ್ಗ ಮೃಗಾಲಯ ಓಪನ್‌

Lion-Tiger-Safari-Tyavrekoppa-in-Shimoga.

ಶಿವಮೊಗ್ಗ: ದೀಪಾವಳಿ ಹಿನ್ನೆಲೆ ಸಾರ್ವಜನಿಕರು ಮೃಗಾಲಯ (Zoo) ವೀಕ್ಷಣೆಗೆ ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿಗಳು ಕಾಲೇಜು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ತ್ಯಾವರೆಕೊಪ್ಪದ ಹುಲಿ ಸಿಂಹಧಾಮದಲ್ಲಿ ಮೃಗಾಲಯ ಹಾಗೂ ಸಫಾರಿ ವೀಕ್ಷಣೆಯನ್ನು ಅ.21 ಸಹ ತೆರೆದಿರುತ್ತದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ರೈಲು ಮಾರ್ಗ ಪರೀಶೀಲನೆ, ವಾಹನಗಳ ಒಡಾಟಕ್ಕೆ ಬದಲಿ ಮಾರ್ಗ

ಜೋಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಳ, ಜಲಪಾತದ ಮುಂದೆ ಸೆಲ್ಫಿ, ಫೋಟೊಗೆ ಪೋಸ್‌

Tourist-at-Jog-falls-in-shimoga

ಸಾಗರ: ವೀಕೆಂಡ್‌ ಹಿನ್ನೆಲೆ ಜೋಗ ಜಲಪಾತಕ್ಕೆ ಇವತ್ತು ದೊಡ್ಡ ಸಂಖ್ಯೆ ಪ್ರವಾಸಿಗರು (Tourist) ಆಗಮಿಸಿದ್ದರು. ಜಲಪಾತದ ವೈಭವ ಕಣ್ತುಂಬಿಕೊಂಡು ಖುಷಿ ಪಟ್ಟರು. ಲಿಂಗನಮಕ್ಕಿ ಜಲಾಶಯದಿಂದ ಕಳೆದ ವಾರ ನೀರು ಹರಿಸಲಾಗಿತ್ತು. ಹಾಗಾಗಿ ಜೋಗ ಜಲಪಾತದಲ್ಲಿ ರಾಜಾ, ರಾಣಿ, ರೋರರ್‌ ಮತ್ತು ರಾಕೆಟ್‌ ಜಲಪಾತಗಳು ಭೋರ್ಗರೆಯುತ್ತಿದ್ದವು. ಇದರ ವಿಡಿಯೋಗಳು ವೈರಲ್‌ ಆಗಿದ್ದವು. ಇದರ ಬೆನ್ನಿಗೆ ಪ್ರವಾಸಿಗರು ಹೆಚ್ಚಳವಾಗಿದ್ದಾರೆ. ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದ ಐದು ಗೇಟ್‌ ಓಪನ್‌, ಇಲ್ಲಿದೆ ಫೋಟೊ ರಿಪೋರ್ಟ್‌ ಜೋಗ ಜಲಪಾತಕ್ಕೆ ಇಂದು ಭಾರಿ ಸಂಖ್ಯೆಯ … Read more

ಹೊಸನಗರದ ಅಬ್ಬಿ ಫಾಲ್ಸ್‌ನಲ್ಲಿ ಬೆಂಗಳೂರಿನ ಯುವಕ ನೀರುಪಾಲು, ವಿಡಿಯೋ ವೈರಲ್‌

Bangalore-Tourist-Youth-at-abbi-falls-at-yedur1

ಹೊಸನಗರ: ತಾಲೂಕಿನ ಯಡೂರು ಬಳಿಯಿರುವ ಅಬ್ಬಿ ಫಾಲ್ಸ್‌ನಲ್ಲಿ ಫೋಟೋ ತೆಗೆಸಿಕೊಳ್ಳಲು ಹೋಗಿ ಬೆಂಗಳೂರು ಮೂಲದ ಪ್ರವಾಸಿಗರೊಬ್ಬರು (Tourist) ನೀರುಪಾಲಾಗಿದ್ದಾನೆ. ಇದನ್ನೂ ಓದಿ » ಶಿವಮೊಗ್ಗದ ಲೇಔಟ್‌ನಲ್ಲಿ ರಾತ್ರಿ 1 ಗಂಟೆಗೆ ಶಸ್ತ್ರಾಸ್ತ್ರ ಹಿಡಿದು, ಮುಖ ಮುಚ್ಚಿಕೊಂಡು ಓಡಾಡಿದ ದುಷ್ಕರ್ಮಿಗಳು ಮೃತರನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ರಮೇಶ್ (35) ಎಂದು ಗುರುತಿಸಲಾಗಿದೆ. ರಮೇಶ್ ತಮ್ಮ ಐವರು ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದರು. ಅಬ್ಬಿ ಫಾಲ್ಸ್‌ನಲ್ಲಿ ಫೋಟೋಗೆ ಪೋಸ್ ನೀಡುವಾಗ ಫಾಲ್ಸ್‌ಗೆ ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. … Read more

ಸಿಗಂದೂರಿಗೆ ತೆರಳುತ್ತಿದ್ದ ಟಿಟಿ ಅಪಘಾತ, ಮುಂಭಾಗ ನಜ್ಜುಗುಜ್ಜು, ಹೇಗಾಯ್ತು ಘಟನೆ?

Bangalore-Based-tempo-traveller-mishap-at-kumsi

ಶಿವಮೊಗ್ಗ: ನಾಯಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಟೆಂಪೊ ಟ್ರಾವಲರ್‌ (Tempo Traveller) ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಕುಂಸಿ – ಚಿಕ್ಕದಾನವಂದಿ ಗ್ರಾಮದ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ. ಬೆಂಗಳೂರಿನ ದೇವನಹಳ್ಳಿ ನಿವಾಸಿಗಳು ಸಿಗಂದೂರು ದೇವಸ್ಥಾನಕ್ಕೆ ತೆರಳುವಾಗ ಅಪಘಾತವಾಗಿದೆ. ಬೆಳಗ್ಗೆ 5.30ರ ಹೊತ್ತಿಗೆ ಟೆಂಪೊ ಟ್ರಾವಲರ್‌ ವಾಹನ ಹೆದ್ದಾರಿಯಲ್ಲಿ ತೆರಳುವಾಗ ನಾಯಿಯೊಂದು ರಸ್ತೆಗೆ ಅಡ್ಡ ಬಂದಿದೆ ಎಂದು ಆರೋಪಿಸಲಾಗಿದೆ. ನಾಯಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ … Read more

ಮೈದುಂಬಿದ ಜೋಗ ಜಲಪಾತ, ವೈಭವ ಕಣ್ತುಂಬಿಕೊಳ್ಳಲು ವಾರದ ದಿನವು ಪ್ರವಾಸಿಗರ ದಂಡು

tourists-visit-jog-falls.

ಸಾಗರ: ಮಲೆನಾಡು ಭಾಗದಲ್ಲಿ ಮಳೆ ಆರಂಭವಾಗುತ್ತಿದ್ದಂತೆ ಜೋಗ ಜಲಪಾತ (Jog Falls) ವೀಕ್ಷಣೆಗೆ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ. ಕಳೆದ ಎರಡು ದಿನ ರಜೆ ಇದ್ದಿದ್ದರಿಂದ ದೊಡ್ಡ ಸಂಖ್ಯೆಯ ಪ್ರವಾಸಿಗರು ಇಲ್ಲಿಗೆ ಆಗಮಿಸಿದ್ದರು. ಸೋಮವಾರವು ಟೂರಿಸ್ಟ್‌ಗಳ ಜಲಪಾತದ ವೈಭವ ಕಣ್ತುಂಬಿಕೊಳ್ಳಲು ಆಗಮಿಸಿದ್ದಾರೆ. ಮಳೆ ಶುರುವಾಗುತ್ತಿದ್ದಂತೆ ಜೋಗ ಜಲಪಾತಗೆ ಪ್ರವಾಸಿಗರು ದೊಡ್ಡ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ರಾಜ್ಯದ ನಾನಾ ಜಿಲ್ಲೆಗಳು ಸೇರಿದಂತೆ ಹೊರ ರಾಜ್ಯದ ಪ್ರವಾಸಿಗರು ಜಲಪಾತ ವೀಕ್ಷಿಸಲು ಬರುತ್ತಿದ್ದಾರೆ. ರಾಜ, ರಾಣಿ, ರೋರರ್‌ ಮತ್ತು ರಾಕೆಟ್‌ ಜಲಪಾತಗಳು ಮೈದುಂಬಿಕೊಂಡಿವೆ. … Read more

ಜೋಗ ಜಲಪಾತ, ಪ್ರವಾಸಿಗರಿಗೆ ಮತ್ತೆ ನಿಷೇಧ, ಎಷ್ಟು ದಿನ? ಕಾರಣವೇನು?

JOG FALLS GENERAL IMAGE

ಶಿವಮೊಗ್ಗ : ಕಾಲಮಿತಿಯೊಳಗೆ ಮುಖ್ಯ ದ್ವಾರದ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆ ಜೋಗ ಜಲಪಾತ (Jog Falls) ವೀಕ್ಷಣೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶ ನಿರ್ಬಂಧವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಜೋಗ ಜಲಪಾತದಲ್ಲಿ (Jog Falls) ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಸಲಾಗುತ್ತಿದೆ. ಮುಖ್ಯದ್ವಾರದ ಕಾಮಗಾರಿ ಹಿನ್ನೆಲೆ ಸುರಕ್ಷತೆ ದೃಷ್ಟಿಯಿಂದ ಜ.1 ರಿಂದ ಮಾ.15ರವರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೆ ಕಾಲಮಿತಿಯೊಳಗೆ ಮುಖ್ಯದ್ವಾರದ … Read more

ಕೊಡಚಾದ್ರಿ ಸಮೀಪ ಮುಖಾಮುಖಿ ಡಿಕ್ಕಿಯಾದ ಟಿಟಿ, ಜೀಪ್‌

Kerala-toursit-jeepa-and-Tempo-Traveller-near-kodachadri

SHIVAMOGGA LIVE NEWS, 25 DECEMBER 2024 ಹೊಸನಗರ : ಕೊಡಚಾದ್ರಿ (Kodachadri) ಸಮೀಪ ಜೀಪ್‌ ಮತ್ತು ಟೆಂಪೊ ಟ್ರಾವಲರ್‌ ಡಿಕ್ಕಿಯಾಗಿದ್ದು 8 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೊಸನಗರ ತಾಲೂಕು ನಿಟ್ಟೂರು ಸಮೀಪದ ಮರಕುಟಿಗ ಬಳಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್‌, ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿ.ಟಿ. ವಾಹನ ಮುಖಾಮುಖಿ ಡಿಕ್ಕಿಯಾಗಿವೆ. ಇದನ್ನೂ ಓದಿ » ಸಿಗಂದೂರು ಸೇತುವೆ, ಡ್ರೋಣ್‌ ವಿಡಿಯೋ ರಿಲೀಸ್‌, … Read more

BREAKING NEWS – ಖಾಸಗಿ ಬಸ್‌ ಪಲ್ಟಿ, ಮಂಗಳೂರಿನಿಂದ ಬಂದಿದ್ದವರಿಗೆ ಗಂಭೀರ ಗಾಯ

Private-Bus-incident-at-Muppane-near-Kargal.

SHIVAMOGGA LIVE NEWS, 15 DECEMBER 2024 ಸಾಗರ : ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್‌ (Private Bus) ಅಪಘಾತಕ್ಕೀಡಾಗಿ ಹಲವರಿಗೆ ಗಂಭೀರ ಗಾಯವಾಗಿದೆ. ಸಾಗರ ತಾಲೂಕು ಅರಳಗೋಡಿನ ಮುಪ್ಪಾನೆ ಸಮೀಪ ಘಟನೆ ಸಂಭವಿಸಿದೆ. ಮಂಗಳೂರಿನಿಂದ ಜೋಗಕ್ಕೆ ಪ್ರವಾಸ ಬಂದಾಗ ಅಪಘಾತ ಸಂಭವಿಸಿದೆ. ಮುಪ್ಪಾನೆ ಸಮೀಪದ ಭಟ್ಕಳ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್‌, ಪಲ್ಟಿಯಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರ್ಗಲ್‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಹೆಚ್ಚಿನ ಮಾಹಿತಿ ಇನ್ನಷ್ಟೆ … Read more

ಉಡುತಡಿಯಲ್ಲಿ ಕಲ್ಯಾಣಿಗೆ ಜಾರಿ ಬಿದ್ದು ಯುವಕ ಸಾವು

youth-at-udutadi-shikaripura-Shiralakoppa

SHIKARIPURA, 25 AUGUST 2024 : ಸ್ನೇಹಿತರೊಂದಿಗೆ ಪ್ರವಾಸಕ್ಕೆ (Tourist) ಬಂದಿದ್ದ ಯುವಕನೊಬ್ಬ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಶಿಕಾರಿಪುರ ತಾಲೂಕು ಉಡುತಡಿ ಗ್ರಾಮದ ಅಕ್ಕಮಹಾದೇವಿ ಜನ್ಮಸ್ಥಳದ ಪ್ರವಾಸಿ ತಾಣದಲ್ಲಿ ಘಟನೆ ಸಂಭವಿಸಿದೆ. ಶಿರಾಳಕೊಪ್ಪದ ಗಂಡಗಡಕೇರಿ ನಿವಾಸಿ ತಾಹೀರ್‌ (21) ಮೃತ ದುರ್ದೈವಿ. ತಾಹೀರ್‌ ಇವತ್ತು ಸ್ನೇಹಿತರೊಂದಿಗೆ ಅಕ್ಕಮಹಾದೇವಿ ಜನ್ಮಸ್ಥಳಕ್ಕೆ ಆಗಮಿಸಿದ್ದ. ಫೋಟೊ ತೆಗೆಯುವ ವೇಳೆ ಕಾಲು ಜಾರಿ ಕಲ್ಯಾಣಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಕೂಡಲೆ ಆತನ ರಕ್ಷಣಾ ಕಾರ್ಯ ನಡೆಸಲಾಯಿತು. ಅಷ್ಟರಲ್ಲಿ ತಾಹೀರ್‌ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ. … Read more

ಕೊಡಚಾದ್ರಿ ಪ್ರವಾಸಿಗರಿಗೆ ಶಾಕ್‌ ನೀಡಿದ ವನ್ಯಜೀವಿ ವಿಭಾಗ, ಇವತ್ತಿನಿಂದ ಪ್ರವೇಶ ನಿಷೇಧ

Kodachadri-Road-Problem

SHIVAMOGGA LIVE | 30 JULY 2023 NITTURU : ಪ್ರಸಿದ್ಧ ಪ್ರವಾಸಿ ತಾಣ ಮತ್ತು ಶ್ರದ್ಧಾ ಕೇಂದ್ರ ಕೊಡಚಾದ್ರಿಗೆ (Kodachadri) ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ. ಮುಂದಿನ ಆದೇಶದವರೆಗೆ ವಾಹನದಲ್ಲಿ ತೆರಳುವುದು, ಚಾರಣ ಮಾಡುವುದನ್ನು ನಿಷೇಧಿಸಿ ವನ್ಯಜೀವಿ ವಿಭಾಗ ಆದೇಶ ಹೊರಡಿಸಿದೆ. ಕೊಡಚಾದ್ರಿಗೆ ದೊಡ್ಡ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಿದ್ದರು. ವನ್ಯಜೀವಿ ವಿಭಾಗದ ಆದೇಶದಿಂದ ಪ್ರವಾಸಿಗರಿಗೆ ನಿರಾಸೆಯಾಗಿದೆ. ನಿಷೇಧಕ್ಕೆ ಕಾರಣವೇನು? ಭಾರಿ ಮಳೆಯಿಂದಾಗಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕಟ್ಟಿನಹೊಳೆ ಮೂಲಕ ಕೊಡಚಾದ್ರಿಗೆ ತೆರಳುವ ಜೀಪ್‌ ಮುಂತಾದ ವಾಹನಗಳು ಹಾಗೂ … Read more