ಶಿವಮೊಗ್ಗದಲ್ಲಿ ಉದ್ಯೋಗ ಮೇಳ, ಬರಲಿವೆ ಪ್ರತಿಷ್ಠಿತ ಕಂಪನಿಗಳು, ಯಾರೆಲ್ಲ ಭಾಗವಹಿಸಬಹುದು?
SHIVAMOGGA LIVE NEWS | 28 MARCH 2024 SHIMOGA : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾ.30ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 10 ಗಂಟೆಯಿಂದ ಉದ್ಯೋಗ ಮೇಳ ಆರಂಭವಾಗಲಿದೆ. ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. … Read more