ವಿದ್ಯಾರ್ಥಿಗಳಿಗೆ ವಿತರಿಸಲು ಶಾಲೆಯಲ್ಲಿ ಇರಿಸಿದ್ದ ಯುನಿಫಾರಂ ಬಟ್ಟೆಗೆ ಬೆಂಕಿ
ಶಿವಮೊಗ್ಗ ಲೈವ್.ಕಾಂ | HOSANAGARA NEWS | 21 JUNE 2021 ವಿದ್ಯಾರ್ಥಿಗಳಿಗೆ ವಿತರಿಸಲು ಇರಿಸಿದ್ದ ಯುನಿಫಾರಂ ಬಟ್ಟೆಗಳು ಬೆಂಕಿಗೆ ಆಹುತಿಯಾಗಿದೆ. ಶಾಲೆಯ ಕೊಠಡಿಯಲ್ಲಿ ಈ ಸಮವಸ್ತ್ರಗಳನ್ನು ಇರಿಸಲಾಗಿತ್ತು. ಹೊಸನಗರ ತಾಲೂಕು ಮಾರುತಿಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಘಟನೆ ಸಂಭವಿಸಿದೆ. ಇವತ್ತು ಬೆಳಗ್ಗೆ ಮುಖ್ಯೋಪಾಧ್ಯಾಯರು ಶಾಲೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಸುಮಾರು 300 ವಿದ್ಯಾರ್ಥಿಗಳಿಗೆ ವಿತರಿಸಲು ಬಟ್ಟೆಯನ್ನು ಇರಿಸಲಾಗಿತ್ತು. ಬೆಂಕಿ ಹೊತ್ತಿದ್ದರಿಂದ ಬಟ್ಟೆ ಸಂಪೂರ್ಣವಾಗಿ ಸುಟ್ಟು ಹೋಗಿದೆ ಎಂದು ಶಾಲೆಯ ಆಡಳಿತ ಮಂಡಳಿ ಆರೋಪಿಸಿದ್ದಾರೆ. … Read more