ಹೊಳೆಬೆನವಳ್ಳಿ ಗ್ರಾಮಸ್ಥರ ಆಕ್ರೋಶ, ಮುಂದೆ ತೀವ್ರ ಹೋರಾಟದ ಎಚ್ಚರಿಕೆ
ಶಿವಮೊಗ್ಗ: ತಾಲೂಕಿನ ಹೊಳೆಬೆನವಳ್ಳಿ ಗ್ರಾಮ ಠಾಣಾ ಜಾಗದಲ್ಲಿ ಸ್ವಚ್ಛಸಂಕೀರ್ಣ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವನ್ನು ವಿರೋಧಿಸಿ ಗ್ರಾಮಸ್ಥರು (Villagers) ಹೊಳೆ ಬೆನವಳ್ಳಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು. ಹೊಳೆಬೆನವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಠಾಣಾ ಜಾಗದ ಅಕ್ಕಪಕ್ಕ ಶ್ರೀ ಉಡಸಲಮ್ಮ ಹಾಗೂ ಶ್ರೀ ಮಾತಂಗಮ್ಮ ಮತ್ತು ಶ್ರೀ ನಂದಿ ಬಸವೇಶ್ವರ ದೇವಸ್ಥಾನಗಳಿವೆ. ತ್ಯಾಜ್ಯ ವಿಲೇವಾರಿ ಘಟಕದ ನಿರ್ಮಾಣದಿಂದ ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭಯವಿದೆ ಗ್ರಾಮಸ್ಥರು ತಿಳಿಸಿದರು. ಸಾರ್ವಜನಿಕರ ಹಿತದೃಷ್ಟಿಯಿಂದ ವಿರೋಧವಿದ್ದರೂ, ಈ ಜಾಗದಲ್ಲಿ … Read more