ಸಚಿವ ಈಶ್ವರಪ್ಪಗೆ ಬೆಂಗಳೂರು ಕೋರ್ಟ್ನಿಂದ ಸಮನ್ಸ್ ಜಾರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜುಲೈ 2021 ಮಾನನಷ್ಟ ಪ್ರಕರಣ ಸಂಬಂಧ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ವಕೀಲ ವಿನೋದ್ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ಸಂಬಂಧ ಬೆಂಗಳೂರಿನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. ಕೆ.ಎಸ್.ಈಶ್ವರಪ್ಪ ಅವರು ತಮ್ಮ ವಿರುದ್ಧ ಅಸಮಂಜಸ ಪದ ಬಳಕೆ ಮಾಡಿದ್ದಾರೆ. ಇದರಿಂದ ತಮ್ಮ ಸಹಪಾಠಿಗಳು ತಮ್ಮನ್ನು ಅನುಮಾನದಿಂದ ನೋಡುವಂತಾಗಿದೆ ಎಂದು ಆರೋಪಿಸಿ ವಕೀಲ ವಿನೋದ್ ಅವರು ಅರ್ಜಿ ಸಲ್ಲಿಸಿದ್ದರು. … Read more