ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಶಿವಮೊಗ್ಗದಲ್ಲಿ ಆಕ್ರೋಶ ಬಂಧನಕ್ಕೆ ಒತ್ತಾಯ, ಕಾರಣವೇನು?
ಶಿವಮೊಗ್ಗ: ‘ಜನಗಣಮನ ಬ್ರಿಟಿಷರ ಸ್ವಾಗತಕ್ಕೆ ರಚಿಸಿದ್ದ ಗೀತೆ’ ಎಂದು ಹೇಳಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವಂತೆ ಹಾಗೂ ಸಂಸದ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಎನ್ಎಸ್‌ಯುಐ ಸಂಘಟನೆ ವತಿಯಿಂದ ಪ್ರತಿಭಟನೆ (Protest) ನಡೆಸಲಾಯಿತು. ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯದ ಶಿಕ್ಷಣ ಸಚಿವರಾಗಿದ್ದವರು. ವಿಧಾನಸಭೆಯ ಸ್ಪೀಕರ್ ಹುದ್ದೆಯಂತಹ ಸಾಂವಿಧಾನಿಕ ಹುದ್ದೆ ನಿಭಾಯಿಸಿದ್ದವರು. ಆದರೆ, ಸಂಸದರಾಗಿ ಜನರಲ್ಲಿ ರಾಷ್ಟ್ರಗೀತೆ, ಸಂವಿಧಾನಗಳ ಬಗ್ಗೆ ಅಗೌರವ ಮೂಡಿಸುವಂತಹ ಮಾತುಗಳನ್ನಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. … Read more