ಆಯನೂರು ಸಮೀಪ ಮನೆ ಗೋಡೆ ಕುಸಿದು ವೃದ್ಧೆ ಸಾವು, ಮಹಿಳೆಗೆ ಗಂಭೀರ ಗಾಯ

House-wall-collapse-at-mandagatta

ಶಿವಮೊಗ್ಗ: ಭಾರಿ ಮಳೆಗೆ ಮನೆ ಗೋಡೆ ಕುಸಿದು (collapse) ವೃದ್ಧೆ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಈ ಪೈಕಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದೆ. ಶಿವಮೊಗ್ಗ ತಾಲೂಕು ಆಯನೂರು ಸಮೀಪದ ಮಂಡಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಡುಗಡಿ ಗ್ರಾಮದಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಮನೆಯ ಗೋಡೆ ಕುಸಿದು ವೃದ್ಧೆ ಸಿದ್ದಮ್ಮ ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದ ಹೇಮಾವತಿ ಎಂಬುವವರಿಗೆ ಗಂಭೀರ ಗಾಯವಾಗಿದೆ. ಪರಶುರಾಮ, ಪಲ್ಲವಿ, ಚೇತನ್‌ ಎಂಬುವವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು … Read more