ಶಿವಮೊಗ್ಗ ಜಿಲ್ಲೆಯಾದ್ಯಂತ ವೀಕೆಂಡ್ ಕರ್ಫ್ಯೂ, ಎರಡು ದಿನ ಯಾವುದಕ್ಕೆಲ್ಲ ಅವಕಾಶವಿದೆ? ಯಾವುದಕ್ಕಿಲ್ಲ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 JUNE 2021 ಶಿವಮೊಗ್ಗ ಜಿಲ್ಲೆಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ. ಶುಕ್ರವಾರ ಸಂಜೆ 7 ಗಂಟೆಯಿಂದೆ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಇರಲಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಯಾವುದಕ್ಕೆಲ್ಲ ಅವಕಾಶವಿದೆ? ಯಾವುದಕ್ಕಿಲ್ಲ? ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಅವಶ್ಯಕ ಮತ್ತು ತುರ್ತು ಚಟುವಟಿಕೆಗಳನ್ನು ಹೊರತುಪಡಿಸಿ ಬೇರೆಲ್ಲಾ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ದಿನದ 24ಗಂಟೆ ಕಾರ್ಯ ನಿರ್ವಹಿಸಬೇಕಾದ, ತುರ್ತು ಹಾಗೂ ಅವಶ್ಯಕ ಸೇವೆಗಳನ್ನು ಒದಗಿಸುವ ಎಲ್ಲಾ ಕೈಗಾರಿಕೆಗಳು, … Read more