ಐದು ವರ್ಷದ ಚಿರತೆಯ ಮೃತದೇಹ ಪತ್ತೆ, ಎಲ್ಲಿ? ಆಗಿದ್ದೇನು?
ಹೊಸನಗರ: ತಾಲೂಕಿನ ಯಡೂರು ಗ್ರಾಮದಲ್ಲಿ ಶನಿವಾರ ಚಿರತೆಯ ಮೃತದೇಹ (Dead leopard) ಪತ್ತೆಯಾಗಿದೆ. ಬೆಳಗ್ಗೆ ಅರಣ್ಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಯಡೂರು ಗ್ರಾಮದಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಚಿರತೆ 5 ವರ್ಷದ ಪ್ರಾಯದ್ದು ಎಂದು ಗೊತ್ತಾಗಿದೆ. ಮೇಲ್ನೋಟಕ್ಕೆ ಸ್ವಾಭಾವಿಕ ಸಾವು ಎಂದು ತಿಳಿದುಬಂದಿದೆ. ಆರ್ಎಫ್ಒ ಸಂತೋಷ ಮಲ್ಲನಗೌಡ್ರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಶು ವೈದ್ಯಾಧಿಕಾರಿಗಳಿಂದ ಮರಣೋತ್ತರ ಪರೀಕ್ಷೆ ನಡೆದು ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಮನೆಯೊಳಗೆ ನುಗ್ಗಿ … Read more