ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 MARCH 2021
ಕಳೆದ ಭಾನುವಾರ ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಭದ್ರಾವತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ಸಂತೋಷ್ ಅವರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ | ಭದ್ರಾವತಿಯಲ್ಲಿ ಕಬಡ್ಡಿ ಫೈನಲ್ ಪಂದ್ಯಾವಳಿ ವೇಳೆ ಕಿರಿಕ್, ಸಂಭ್ರಮಾಚರಣೆ ವೇಳೆ ಫೈಟ್, ಜಗಳಕ್ಕೇನು ಕಾರಣ?
ಮಾರ್ಚ್ 5ರ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಐದು ಅಥವಾ ಅದಕ್ಕಿಂತಲೂ ಹೆಚ್ಚು ಜನರು ಗುಂಪುಗೂಡುವಂತಿಲ್ಲ. ಪ್ರತಿಭಟನೆ, ಮೆರವಣಿಗೆ, ಸಭೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ. ಮಾರಕಾಸ್ತ್ರ ಮತ್ತು ಇತರೆ ಆಯುಧಗಳ ಸಂಗ್ರಹಣೆ, ಸಾಗಣೆಯನ್ನು ನಿಷೇಧಿಸಲಾಗಿದೆ.
ಐದು ಎಫ್ಐಆರ್ ದಾಖಲು
ಗಲಾಟೆ ಸಂಬಂಧ ಈತನಕ ಐದು ಎಫ್ಐಆರ್ಗಳನ್ನು ದಾಖಲು ಮಾಡಲಾಗಿದೆ. ಆದರೆ ಗಲಾಟೆ ಸಂಬಂಧ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಪ್ರತ್ಯೇಕವಾಗಿ ಪ್ರತಿಭಟನೆ, ಮೆರವಣಿಗೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆ ವರದಿ ಆಧರಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

About The Editor
ನಿತಿನ್ ಆರ್.ಕೈದೊಟ್ಲು






