ಭದ್ರಾವತಿ ಸಿಟಿಯಲ್ಲಿ ಇವತ್ತಿನಿಂದ ನಿಷೇಧಾಜ್ಞೆ ಜಾರಿ, ಶಾಲೆಗಳಿಗೆ ರಜೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 21 ಫೆಬ್ರವರಿ 2022

ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರ ಪ್ರಕ್ಷುಬ್ದಗೊಂಡಿದೆ. ಮುಂಜಾಗ್ರತ ಕ್ರಮವಾಗಿ ಭದ್ರಾವತಿ ಪಟ್ಟಣದಲ್ಲಿಯು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ಪ್ರದೀಪ್ ಅವರು ಆದೇಶ ಹೊರಡಿಸಿದ್ದಾರೆ.

Shimoga Nanjappa Hospital Cancer Care

ಫೆ.21ರ ಬೆಳಗ್ಗೆ 8 ಗಂಟೆಯಿಂದ ಫೆ.22ರ ರಾತ್ರಿ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿಜನರು ಗುಂಪುಗೂಡುವಂತೆ ಇಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಭದ್ರಾವತಿ ನಗರದಲ್ಲಿಯು ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ದ್ವಿಚಕ್ರ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ರಾತ್ರಿ 9 ಗಂಟೆ ನಂತರ ಅಂಗಡಿ ಮುಂಗಟ್ಟು ಮುಚ್ಚಬೇಕು, ಚಲನಚಿತ್ರ ಪ್ರದರ್ಶನ ನಿಷೇಧಿಸಲಾಗಿದೆ.

ಶಾಲೆಗಳಿಗೆ ರಜೆ ಘೋಷಣೆ

ಮುಂಜಾಗ್ರತ ಕ್ರಮವಾಗಿ ಭದ್ರಾವತಿ ನಗರ ವ್ಯಾಪ್ತಿಯಲ್ಲಿ ಫೆ.21ರಂದು 1 ರಿಂದ 10 ತರಗತಿವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷಗಳನ್ನು ಕೂಡ ಮುಂದೂಡಲಾಗಿದೆ ಎಂದು ತಹಶೀಲ್ದಾರ್ ಪ್ರದೀಪ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | ಶಿವಮೊಗ್ಗದಲ್ಲಿ ರಾತ್ರಿ ಬೈಕ್ ಸಂಚಾರ ನಿಷೇಧ, ಅಂಗಡಿಗಳು ಬಂದ್ ಮಾಡಲು ಟೈಮ್ ಫಿಕ್ಸ್

Shimoga Live News Website Reach Age Wise

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment