ಭದ್ರಾವತಿ, ಶಿಕಾರಿಪುರದಲ್ಲಿ ನಿಷೇಧಾಜ್ಞೆ, ಯಾವಾಗ? ಕಾರಣವೇನು?

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

NAMMUR NEWS NEW PROMO 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021

ಭದ್ರಾವತಿ ಮತ್ತು ಶಿಕಾರಿಪುರದ ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮಾರ್ಚ್‌ 27ರ ಸಂಜೆ 5 ಗಂಟೆಯಿಂದ 29ರ ಸಂಜೆ 5 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ.

ಶಿಕಾರಿಪುರ ಪುರಸಭೆ, ತಾಲೂಕಿನ ಚುರ್ಚಿಗುಂಡಿ, ತರಲಘಟ್ಟ ಗ್ರಾಮ ಪಂಚಾಯಿತಿಗಳು, ಭದ್ರಾವತಿ ತಾಲೂಕಿನ ಕೋಮಾರನಹಳ್ಳಿ, ವೀರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಚುನಾವಣೆ ನಡೆಯಲಿದೆ.

ಮತ ಎಣಿಕೆ ದಿನವೂ ನಿಷೇಧಾಜ್ಞೆ

ಭದ್ರಾವತಿ ಮತ್ತು ಶಿಕಾರಿಪುರ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್‌ 31ರಂದು ಬೆಳಗ್ಗೆ 6ರಿಂದ ಏಪ್ರಿಲ್‌ 1ರ ಬೆಳಗ್ಗೆ 6 ಗಂಟೆವರೆಗೆ ಇವೆರಡೂ ತಾಲೂಕು ಕೇಂದ್ರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

Leave a Comment