ಭದ್ರಾವತಿಯ 22 ವರ್ಷದ ಯುವಕನಿಗೆ 20 ವರ್ಷ ಜೈಲು, ₹2.50 ಲಕ್ಷ ದಂಡ

ಶಿವಮೊಗ್ಗ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು (Shimoga Court) 20 ವರ್ಷಗಳ ಕಠಿಣ ಜೈಲು ಶಿಕ್ಷೆ (Jail) ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಪೋಕ್ಸೋ ಕೇಸ್‌ ದಾಖಲಾಗಿತ್ತು

2022ರಲ್ಲಿ ಭದ್ರಾವತಿಯ (Bhadravathi) ನಿವಾಸಿಯಾದ 22 ವರ್ಷದ ಯುವಕನೊಬ್ಬ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಘಟನೆಗೆ ಸಂಬಂಧಿಸಿದಂತೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

Bhadravathi-City-Board

ಐಪಿಎಸ್‌ ಅಧಿಕಾರಿಯಿಂದ ತನಿಖೆ

ಭದ್ರಾವತಿ ಉಪವಿಭಾಗದ ಅಂದಿನ ಎಎಸ್‌ಪಿ ಜೀತೇಂದ್ರಕುಮಾರ್ ದಯಾಮಾ (Jitendra Kumar Dayama) ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ (Judge) ನಿಂಗನಗೌಡ ಭ. ಪಾಟೀಲ್ ಅವರು, ಆರೋಪಿಯ ವಿರುದ್ಧದ ಸಾಕ್ಷ್ಯಾಧಾರಗಳು ದೃಢಪಟ್ಟ ಹಿನ್ನೆಲೆ ಶಿಕ್ಷೆ ಪ್ರಕಟಿಸಿದ್ದಾರೆ.

Shivamogga Live Promotion

ಕಠಿಣ ಜೈಲು ಶಿಕ್ಷೆ, ₹2.50 ಲಕ್ಷ ದಂಡ

ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ. ₹2,50,000 ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ ₹2,25,000 ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.