ಭದ್ರಾವತಿಯ 30 ವರ್ಷದ ವ್ಯಕ್ತಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

 ಶಿವಮೊಗ್ಗ  LIVE 

ಭದ್ರಾವತಿ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 30 ವರ್ಷದ ವ್ಯಕ್ತಿಗೆ ಎಫ್‌ಟಿಎಸ್‌ಸಿ– 1 ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ.

2022ರಲ್ಲಿ ಬಾಲಕಿಯ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯದ ಕುರಿತು ಅಂದಿನ ಸಿಪಿಐ ರಾಘವೇಂದ್ರ ಕಾಂಡಿಕೆ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪ‌ ಸಾಬೀತಾದ ಕಾರಣ ನ್ಯಾ. ನಿಂಗನಗೌಡ ಪಾಟೀಲ್ ಅವರು ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹ 65,000 ದಂಡ  ವಿಧಿಸಿದ್ದಾರೆ. ನೊಂದ ಬಾಲಕಿಗೆ ಸರ್ಕಾರವು ₹ 4.50 ಲಕ್ಷ ನೆರವು ನೀಡುವಂತೆ ಅದೇಶಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಪಾರ್ಕಿಂಗ್‌ ಸಮಸ್ಯೆ, ರಸ್ತೆಗಿಳಿದ ರಕ್ಷಣಾಧಿಕಾರಿ, ಅಡ್ಡಾದಿಡ್ಡಿ ಪಾರ್ಕಿಂಗ್‌ಗೆ ಬ್ರೇಕ್‌, ಏನೇನಾಯ್ತು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment