ಭದ್ರಾವತಿಯ ಯುವಕನಿಗೆ 3 ವರ್ಷ ಜೈಲು, 2.88 ಲಕ್ಷ ರೂ. ದಂಡ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 28 JUNE 2023

SHIMOGA : ಹನ್ನೊಂದು ವರ್ಷದ ಬಾಲಕಿಗೆ ಲೈಂಗಿಕ ಕಿರಿಕುಳ ನೀಡಿದ ವ್ಯಕ್ತಿಗೆ ನ್ಯಾಯಾಲಯವು 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ (Imprisonment) ಮತ್ತು 2.80 ಲಕ್ಷ ರೂ. ದಂಡ ವಿಧಿಸಿದೆ.

Shivamogga-Court-General-Image

2019ರಲ್ಲಿ ಭದ್ರಾವತಿಯಲ್ಲಿ 23 ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕಿ ದೂರು ನೀಡಿದ್ದಳು. ಭದ್ರಾವತಿ ಓಲ್ಡ್‌ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ತನಿಖಾಧಿಕಾರಿ ಎನ್‌.ನಂಜಪ್ಪ ಅವರು ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಇದನ್ನೂ ಓದಿ – ಲಂಚದ ಹಣ ಪಡೆಯುತ್ತಿದ್ದಾಗ ಮಹಿಳಾ ಅಧಿಕಾರಿ ಎದುರಿಗೆ ಲೋಕಾಯುಕ್ತ ಪೊಲೀಸರು ಪ್ರತ್ಯಕ್ಷ

ವಿಚಾರಣೆ ನಡೆಸಿದ ಹೆಚ್ಚುವರಿ ಮತ್ತು ಜಿಲ್ಲಾ ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶರು ಶಿಕ್ಷೆ (Imprisonment) ವಿಧಿಸಿ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕರಾಗಿ ಹರಿಪ್ರಸಾದ್‌ ಅವರು ವಾದ ಮಂಡಿಸಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment