ಭದ್ರಾವತಿಯ 49 ವರ್ಷದ ವ್ಯಕ್ತಿಗೆ 5 ವರ್ಷ ಜೈಲು ಶಿಕ್ಷೆ, ₹15,000 ದಂಡ, ಕಾರಣವೇನು?

ಶಿವಮೊಗ್ಗ: ಭದ್ರಾವತಿ ತಾಲ್ಲೂಕಿನಲ್ಲಿ 11 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 49 ವರ್ಷದ ಅಪರಾಧಿಗೆ 5 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹15,000 ದಂಡ ವಿಧಿಸಿ ಶಿವಮೊಗ್ಗದ ನ್ಯಾಯಾಲಯ ತೀರ್ಪು ನೀಡಿದೆ.

ಏನಿದು ಪ್ರಕರಣ?

2024ರಲ್ಲಿ ಭದ್ರಾವತಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಕೃತ್ಯ ನಡೆದಿತ್ತು. ಈ ಕುರಿತು ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ಅಂದಿನ ತನಿಖಾಧಿಕಾರಿ, ಪಿಎಸ್‌ಐ ಕವಿತಾ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

Shivamogga-Court-Building

ಆರೋಪ ಸಾಬೀತು, ಶಿಕ್ಷೆ ಪ್ರಕಟ

ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ಸರ್ಕಾರದ ಪರ ಸರ್ಕಾರಿ ಅಭಿಯೋಜಕ ಶ್ರೀಧರ್ ಅವರು ವಾದ ಮಂಡಿಸಿದ್ದರು. ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಅವರು ತೀರ್ಪು ಪ್ರಕಟಿಸಿದ್ದಾರೆ. ಇನ್ನು, ಸಂತ್ರಸ್ತ ಬಾಲಕಿಗೆ ₹50,000 ಪರಿಹಾರ ಒದಗಿಸುವಂತೆ ನ್ಯಾಯಾಲಯ ಆದೇಶಿಸಿದೆ.