ಶಂಕರಘಟ್ಟ: ಡಿಸಿಸಿ ಬ್ಯಾಂಕ್‌ಗೆ (Bank Branch) ನುಗ್ಗಿದ ಜಿಂಕೆಯನ್ನು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಸಿಬ್ಬಂದಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಭದ್ರಾವತಿ ತಾಲೂಕು ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದೆ. ಗಾಬರಿಯಲ್ಲಿ ಗಾಜಿಗೆ ಗುದ್ದಿಕೊಂಡು ಕುಸಿದು ಬಿದ್ದಿತ್ತು. ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಿಂಕೆಯ ರಕ್ಷಣೆ ಮಾಡಿದ್ದಾರೆ. ಬಳಿಕ ಅದನ್ನು ಸಮೀಪದ ಅರಣ್ಯಕ್ಕೆ ಕೊಂಡೊಯ್ದು ಬಿಡುಗಡೆ ಮಾಡಿದ್ದಾರೆ.

ಬೆನ್ನಟ್ಟಿ ಬಂದ ನಾಯಿಗಳಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಜಿಂಕೆ ಕುವೆಂಪು ವಿಶ್ವವಿದ್ಯಾಲಯದ ಒಳಭಾಗದಿಂದ ಜಿಗಿದು ಡಿಸಿಸಿ ಬ್ಯಾಂಕಿಗೆ ನುಗ್ಗಿದೆ. ಬ್ಯಾಂಕ್ ಸಿಬ್ಬಂದಿ ತಕ್ಷಣ ಗೇಟ್‌ಗಳನ್ನು ಬಂದ್ ಮಾಡಿ ಜಿಂಕೆಯನ್ನು ರಕ್ಷಿಸಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ – ಭದ್ರಾ ನಾಲೆಯಲ್ಲಿ ಒಬ್ಬರ ಮೃತದೇಹ ಪತ್ತೆ, ನಾಪತ್ತೆಯಾದ ಮೂವರಿಗೆ ಶೋಧ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





