ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 8 ಸೆಪ್ಟಂಬರ್ 2020
ಆಮ್ ಆದ್ಮಿ ಪಕ್ಷದ ವತಿಯಿಂದ ಭದ್ರಾವತಿಯಲ್ಲಿ ಎಎಪಿ ಕೇರ್ಸ್ ಮತ್ತು ಆಕ್ಸಿಮಿತ್ರ ಯೋಜನೆಗೆ ಚಾಲನೆ ನೀಡಲಾಗಿದೆ. ಕರೋನ ಕುರಿತು ಜಾಗೃತಿ ಮೂಡಿಸಲು ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜಾರಿಗೆ ತಂದಿರುವ ಈ ಯೋಜನೆಯನ್ನು ಸ್ಥಳೀಯವಾಗಿಯೂ ಜಾರಿಗೊಳಿಸಲಾಗುತ್ತಿದೆ.
ಭದ್ರಾವತಿ ರಂಗಪ್ಪ ಸರ್ಕಲ್‍ನಲ್ಲಿ ಎಎಪಿ ಕೇರ್ಸ್ ಮತ್ತು ಆಕ್ಸಿಮಿತ್ರಗೆ ಚಾಲನೆ ನೀಡಲಾಯಿತು. ಕರೋನ ಸೋಂಕು ವ್ಯಾಪಕಾಗಿ ಹರಡುತ್ತಿದ್ದು, ಅದರ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುಂಜಾಗ್ರತೆ ಕುರಿತು ತಿಳಿವಳಿಕೆ ಮೂಡಿಸಲಾಯಿತು. ಜನರಿಗೆ ಥರ್ಮಲ್ ಸ್ಕ್ಯಾನಿಂಗ್ ಮತ್ತು ಆಕ್ಸಿಜನ್ ಪ್ರಮಾಣ ಪರಿಶೀಲಿಸುವ ಮೂಲಕ ಯೋಜನೆಗೆ ಚಾಲನೆ ನೀಡಲಾಯಿತು.
ಎಎಪಿ ಜಿಲ್ಲಾಧ್ಯಕ್ಷ ಹೆಚ್.ರವಿಕುಮಾರ್, ತಾಲೂಕು ಉಪಾಧ್ಯಕ್ಷ ಇಬ್ರಾಹಿಂ ಖಾನ್, ಪರಮೇಶ್ವರಾಚಾರ್, ಪರಮೇಶ್ ನಾಯ್ಕ್, ಜೋಸೆಫ್, ಮುಳ್ಕೆರೆ ಲೋಕೇಶ್ ಸೇರಿದಂತೆ ಹಲವರು ಇದ್ದರು.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422