ರಸ್ತೆ ಬದಿ ನವಜಾತ ಗಂಡು ಶಿಶು, ವಾರಸುದಾರರ ಪತ್ತೆಗೆ ಮನವಿ

ಶಿವಮೊಗ್ಗ: ಭದ್ರಾವತಿ ತಾಲೂಕಿನ ಮಲ್ಲಾಪುರ ಗ್ರಾಮದ ಗೇಟ್ ಹತ್ತಿರ ರಸ್ತೆ ಬದಿ ಅನಾಮಧೇಯ ಗಂಡು ಮಗು (baby boy) ಪತ್ತೆಯಾಗಿತ್ತು. ಹೊಳೆಹೊನ್ನೂರು ಠಾಣಾಧಿಕಾರಿ ಮಗುವನ್ನು ರಕ್ಷಿಸಿ ಡಿಸೆಂಬರ್ 16ರಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ದಾಖಲಿಸಿದ್ದಾರೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಮಗುವಿನ ಮುಂದಿನ ಪುನರ್ವಸತಿ ಹಿತದೃಷ್ಟಿಯಿಂದ ಮಗುವಿನ ಸಂಬಂಧಿಕರು ಯಾರಾದರೂ ಇದ್ದಲ್ಲಿ ಅಥವಾ ಪೋಷಕರ ಬಗ್ಗೆ ಮಾಹಿತಿ ದೊರೆತಲ್ಲಿ ಸೂಕ್ತ ದಾಖಲೆಗಳ ಜತೆ ಅಧೀಕ್ಷಕರು, ಸರ್ಕಾರಿ ಬಾಲಕರ ಬಾಲಮಂದಿರ, ಆಲೊಳ, ಶಿವಮೊಗ್ಗ ಇವರ ಕಚೇರಿಗೆ ಖುದ್ದಾಗಿ ಅಥವಾ ದೂ. 08182-295511 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Unknown-Baby-found-near-holehonnuru

Unknown-Baby-found-near-holehonnuru

ಇದನ್ನೂ ಓದಿ » ಐದು ವರ್ಷದ ಚಿರತೆಯ ಮೃತದೇಹ ಪತ್ತೆ, ಎಲ್ಲಿ? ಆಗಿದ್ದೇನು?

Leave a Comment