ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 06 ಜುಲೈ 2019
ಪುತ್ತೂರಿನ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ, ಭದ್ರಾವತಿಯಲ್ಲಿ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿತು. ಇನ್ನು, ಈ ಘಟನೆ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಎಬಿವಿಪಿ ಸಂಘಟನೆ ಹೆಸರಿಗೆ ಕಳಂಕ ತರುವಂತೆ ಮೆಸೇಜ್ ಪ್ರಕಟಿಸುತ್ತಿರುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ತಹಶೀಲ್ದಾರ್ ಕಚೇರಿ ಮುಂದೆ ಇವತ್ತು ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ಅತ್ಯಾಚಾರ ನಡೆಸಿದ ಐವರು ಆರೋಪಿಗಳನ್ನು ಪೊಲೀಸರು ಶೀಘ್ರದಲ್ಲೇ ಬಂಧಿಸಿದ್ದಾರೆ. ಈ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಗೂ ಮೊದಲು ಭದ್ರಾವತಿಯ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು. ಎಬಿವಿಪಿ ಪ್ರಮುಖರಾದ ಧನುಷ್, ರೇಷ್ಮ, ಸುಹಾಸಿನಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು















