ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 JANUARY 2021
ಜಿಎಸ್ಟಿ ರಿಜಿಸ್ಟ್ರೇಷನ್ಗೆ ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಒಬ್ಬಾತ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾನೆ. ಭದ್ರಾವತಿಯ ಕಮರ್ಷಿಯಲ್ ಟ್ಯಾಕ್ಸ್ ಕಚೇರಿಯಲ್ಲಿ ದಾಳಿ ನಡೆಸಲಾಗಿದೆ.
ವೇಣು (36), ಎಸಿಬಿ ಬಲೆಗೆ ಬಿದ್ದ ಡಾಟಾ ಎಂಟ್ರಿ ಆಪರೇಟರ್. ಶಾಮಿಯಾನ ಅಂಗಡಿ ಮಾಲೀಕರೊಬ್ಬರ ಜಿಎಸ್ಟಿ ರಿಜಿಸ್ಟ್ರೇಷನ್ಗೆ, ವೇಣು ಲಂಚ ಕೇಳಿದ್ದ. ಇವತ್ತು 2500 ರೂ. ಹಣ ಸ್ವೀಕರಿಸುತ್ತಿದ್ದಾಗ ದಾಳಿ ನಡೆಸಿ, ಬಂಧಿಸಲಾಗಿದೆ.
ಎಸಿಬಿ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ, ಇನ್ಸ್ಪೆಕ್ಟರ್ ಇಮ್ರಾನ್ ಬೇಗ್, ಸಿಬ್ಬಂದಿಗಳಾದ ವಸಂತ್, ರಘನಾಯ್ಕ್, ನಾಗರಾಜ್, ಸುರೇಂದ್ರ, ಹರೀಶ್, ಯೋಗೇಶ್, ಶ್ರೀನಿವಾಸ್ ದಾಳಿಯಲ್ಲಿ ಪಾಲ್ಗೊಂಡಿದ್ದರು.
(REFERENCE IMAGE ONLY)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]