ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಆಗಸ್ಟ್ 2020
ಐದು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಲೆ ನಗರಸಭೆ ಗುಮಾಸ್ತ ಒಬ್ಬರು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಖಾತೆ ಬದಲಾವಣೆ ವಿಚಾರದಲ್ಲಿ ಇವರು ಲಂಚಕ್ಕೆ ಡಿಮಾಂಡ್ ಮಾಡಿದ್ದರು.
ನಗರಸಭೆ ಗುಮಾಸ್ತ ಕುಮಾರ್ ಎಸಿಬಿ ಬಲೆಗೆ ಬಿದ್ದವರು. ಭದ್ರಾವತಿಯ ಬೊಮ್ಮನಕಟ್ಟೆಯಲ್ಲಿ ಲೇಔಟ್ ನಿರ್ಮಿಸಲಾಗಿದೆ. ಇಲ್ಲಿ ಸೈಟ್ಗೆ ಖಾತೆ ಮಾಡಿ ಕೊಡಲು ಗುಮಾಸ್ತ 5 ಸಾವಿರ ರೂ ಲಂಚದ ಬೇಡಿಕೆ ಇಟ್ಟಿದ್ದರು. ಈ ಕುರಿತು ಸುಲ್ತಾಬ್ ಶರೀಫ್ ಎಂಬುವವರು ಎಸಿಬಿಗೆ ದೂರು ನೀಡಿದ್ದರು. ಹಾಗಾಗಿ ದಾಳಿ ನಡೆಸಲಾಗಿತ್ತು.
ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು
ಐದು ಸಾವಿರ ರುಪಾಯಿ ಲಂಚದ ಹಣ ಪಡೆಯುತ್ತಿದ್ದಾಗ ಶಿವಮೊಗ್ಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ಎಸಿಬಿ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ಗಳಾದ ತಿಪ್ಪೇಸ್ವಾಮಿ, ವಿರೇಂದ್ರ, ಸಿಬ್ಬಂದಿಗಳಾದ ಯೋಗೀಶ್, ರಘು, ನಾಗರಾಜ್ ಸೇರಿ ಇತರರು ದಾಳಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]