ಶಿವಮೊಗ್ಗ ಲೈವ್.ಕಾಂ | ACCIDENT | 28 ಏಪ್ರಿಲ್ 2022
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಸವಾರನೊಬ್ಬ ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಹೊಸ ಸಿದ್ದಾಪುರ ಗ್ರಾಮದ ಅರುಣ್ (30) ಮೃತ ದುರ್ದೈವಿ. ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಹಿಟ್ ಅಂಡ್ ರನ್
ಅರುಣ್ ಬೈಪಾಸ್ ರಸ್ತೆಯಲ್ಲಿ ಸಿದ್ದಾಪುರದ ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಎದುರಿನಿಂದ ಬಂದ ವಾಹನ ಅರುಣ್‌ಗೆ ಡಿಕ್ಕಿ ಹೊಡೆದಿರುವ ಶಂಕೆ ಇದೆ. ಕೆಳಗೆ ಬಿದ್ದ ಅರುಣ್ ಮೇಲೆ ವಾಹನಗಳು ಹತ್ತಿವೆ.
ಕಡು ಕತ್ತಲೆಯಲ್ಲಿ ಅಪಘಾತ
ಇವತ್ತು ಭಾರಿ ಗಾಳಿ, ಮಳೆಗೆ ಭದ್ರಾವತಿ ಬೈಪಾಸ್ ರಸ್ತೆ ಅಕ್ಕಪಕ್ಕದ ಗ್ರಾಮಗಳಲ್ಲಿ ವಿದ್ಯುತ್ ಕಡಿತವಾಗಿದೆ. ಬೈಪಾಸ್ ರಸ್ತೆಯಲ್ಲಿಯು ಬೆಳಕು ಇಲ್ಲ. ಹಾಗಾಗಿ ಅಪಘಾತ ಸಂಭವಿಸಿರುವ ಶಂಕೆ ಇದೆ.
ವಿಚಾರ ತಿಳಿಯುತ್ತಿದ್ದಂತೆ ಅರುಣ್ ಕುಟುಂಬದವರು, ಸ್ನೇಹಿತರು, ಅಕ್ಕಪಕ್ಕದ ಗ್ರಾಮದವರು ಸ್ಥಳಕ್ಕೆ ಜಮಾಯಿಸಿದ್ದರು.
ಭದ್ರಾವತಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






