SHIVAMOGGA LIVE NEWS | ACCIDENT | 2 ಜೂನ್ 2022
ರಸ್ತೆ ಬದಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸವಾರರಿಬ್ಬರು ಮೃತಪಟ್ಟಿದ್ದಾರೆ. ಅತಿ ವೇಗವೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಭದ್ರಾವತಿ ತಾಲೂಕು ಹುಣಸೆಕಟ್ಟೆ ಜಂಕ್ಷನ್ ಸಮೀಪ ಘಟನೆ ಸಂಭವಿಸಿದೆ. ಉತ್ತಮ ಚಕ್ರವರ್ತಿ ಮತ್ತು ಮನೋಜ್ ಮೃತ ದುರ್ದೈವಿಗಳು.
ಕಳೆದ ರಾತ್ರಿ ಬೈಕಿನಲ್ಲಿ ಭದ್ರಾವತಿ ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಜಂಕ್ಷನ್ ಸರ್ಕಲ್’ನಿಂದ ಭದ್ರಾವತಿ ರಸ್ತೆಯಲ್ಲಿ ತೆರಳುತ್ತಿದ್ದಾಗ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ತನಿಕೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಒಂದು ಸಾವಿರ ರೂ. ಲಂಚ ಪಡೆಯುತ್ತಿದ್ದ ಮಹಿಳಾ ಅಧಿಕಾರಿ ಮೇಲೆ ಎಸಿಬಿ ದಾಳಿ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.