ಶಿವಮೊಗ್ಗ ಲೈವ್
ಭದ್ರಾವತಿ: ಕಳೆದ 11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಬಂದಿಸಿ, ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ. ಗಿರೀಶ್ ನಾಯ್ಕ್ ಬಂಧಿತ ಆರೋಪಿ. (ಈ ಸುದ್ದಿಯನ್ನು ಇನ್ನು 24 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಈತನ ವಿರುದ್ಧ ಎಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಾರಂಟ್ ಜಾರಿಯಾಗಿತ್ತು. ಈತ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ಪ್ರಕರಣವನ್ನು ಎಲ್ಪಿಆರ್ ಎಂದು ಘೋಷಿಸಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
