SHIVAMOGGA LIVE NEWS | 19 OCTOBER 2023
BHADRAVATHI : ವಿಐಎಸ್‌ಎಲ್ ಶತಾಮಾನೋತ್ಸವ ಸಂಭ್ರಮ ಕಾರ್ಯಕ್ರಮದ ಹಿನ್ನೆಲೆ ಭದ್ರಾವತಿ ನ್ಯೂಟೌನ್ ಶಾರದಾ ಮಂದಿರದಲ್ಲಿ ಪೂರ್ವಭಾವಿ ಸಭೆ (Meeting) ಆಯೋಜಿಸಲಾಗಿತ್ತು. ನಟ, ವಿಐಎಸ್‌ಎಲ್ ಶತಮಾನೋತ್ಸವ ಸಮಿತಿ ಅಧ್ಯಕ್ಷ ದೊಡ್ಡಣ್ಣ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆ ಕುರಿತು ಚರ್ಚೆ ನಡೆಸಲಾಯಿತು.
ಇದೆ ವೇಳೆ ಮಾತನಾಡಿದ ನಟ ದೊಡ್ಡಣ್ಣ, ನವೆಂಬರ್ 3 ರಿಂದ 5ರವರೆಗೆ ವಿಐಎಸ್‌ಎಲ್‌ನಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಮೈಸೂರು ಅರಸ ಯದುವೀರ್ ಅವರು ಆಗಮಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸುವ ಪ್ರಯತ್ನವಾಗುತ್ತಿದೆ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಜ್ಯೋತಿರಾಧಿತ್ಯ ಸಿಂಧ್ಯಾ, ಪ್ರಹ್ಲಾದ್ ಜೋಶಿ, ನಾರಾಯಣ ಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಬಿ.ಕೆ.ಸಂಗಮೇಶ್ವರ್, ಸಚಿವರುಗಳು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಜಯದೇವ ಆಸ್ಪತ್ರೆಯ ವೈದ್ಯ ಡಾ. ಮಂಜುನಾಥ್, ಇನ್ಫೋಸಿಸ್ ಫೌಂಡೇಶನ್‌ನ ಸುಧಾ ಮೂರ್ತಿ, ಉದ್ಯಮಿಗಳಾದ ವಿಜಯ ಸಂಕೇಶ್ವರ, ಪ್ರಭಾಕರ್ ಕೋರೆ ಅವರನ್ನು ಗೌರವಿಸಲಾಗುತ್ತದೆ. ವಿವಿಧ ಮಠಾಧೀಶರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕಾಗಿ 12 ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ – ವಿಐಎಸ್‌ಎಲ್ ಕಾರ್ಖಾನೆಗೆ ರೈಲಿನಲ್ಲಿ ಬಂತು ಬ್ಲೂಮ್, ಆಡಳಿತ ಮಂಡಳಿ, ಕಾರ್ಮಿಕರಿಂದ ಪೂಜೆ
ವಿಐಎಸ್‌ಎಲ್ ಶತಮಾನೋತ್ಸವ ಸಮಿತಿ ಕಾರ್ಯದರ್ಶಿ ಎಂ.ವಿ.ರೇವಣ್ಣಸಿದ್ದಯ್ಯ, ವಿಐಎಸ್‌ಎಲ್ ಕಾರ್ಮಿಕ ಸಂಘದ ಬಸಂತಕುಮಾರ್, ನಿವೃತ್ತ ಅಧಿಕಾರಿ ಎಸ್.ಅಡವೀಶಯ್ಯ, ಮಂಜುನಾಥ್, ಕುಮಾರಸ್ವಾಮಿ, ಸುರೇಶ್, ರಾಕೇಶ್, ನರಸಿಂಹಾಚಾರ್ ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200