ಪಂಪ್‌ಸೆಟ್‌ ಮೋಟರ್‌ಗಳು ಕಳ್ಳತನ ಮಾಡಿದ್ದ ಆರೋಪಿ ಅರೆಸ್ಟ್‌, ಯಾರು ಈತ? ಎಲ್ಲಿ ಆಗಿದ್ದು?

ಭದ್ರಾವತಿ: ಪಂಪ್‌ಸೆಟ್ ಮೋಟಾರ್‌ಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಪೇಪರ್ ಟೌನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಳುವಾಗಿದ್ದ ₹30,000 ಮೌಲ್ಯದ ಎರಡು ಮೋಟಾರ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ರಬ್ಬರ್ ಕಾಡು ಗ್ರಾಮದಲ್ಲಿ ಘಟನೆ ನಡೆದಿತ್ತು. ಪ್ರಕರಣ ಸಂಬಂಧ ಚಂದ್ರ (40) ಎಂಬಾತನನ್ನು ಬಂಧಿಸಲಾಗಿದೆ. (ಈ ಸುದ್ದಿಯನ್ನು ಇನ್ನು 26 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ರಬ್ಬರ್ ಕಾಡು ಗ್ರಾಮದಲ್ಲಿ ಪಂಪ್‌ಸೆಟ್ ಮೋಟಾರ್‌ಗಳು ಕಳುವಾದ ಕುರಿತು ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Bhadravathi-Police-Arrest-Agriculture-Motor-Theif

ತನಿಖೆಯಲ್ಲಿ ಪಿಎಸ್‌ಐ ಕುಮಾರ್ ಎನ್., ಸಿಎಚ್‌ಸಿ ನಾಗರಾಜ್.ಎಂ ಅವರು ಆರೋಪಿಯನ್ನು ವಶಕ್ಕೆ ಪಡೆದು, ಕಳುವಾಗಿದ್ದ ಮೋಟಾರ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: