ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು, ರೈತರ ಆಕ್ರೋಶ

ಭದ್ರಾವತಿ: ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಹೆಚ್ಚುವರಿಯಾಗಿ ನೀರು ಹರಿಸಲು ಆದೇಶಿಸಿರುವುದನ್ನು ವಿರೋಧಿಸಿ ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಯ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಲಕ್ಕವಳ್ಳಿ ಜಲಾಶಯದ ಬಳಿ ಇರುವ ಭದ್ರಾ ಮೇಲ್ದಂಡೆ ಯೋಜನೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. (ಈ ಸುದ್ದಿಯನ್ನು ಇನ್ನು 46 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಈ ಸಂದರ್ಭ ಮಾತನಾಡಿದ ರೈತ ಮುಖಂಡ ಶಾಮನೂರು ಲಿಂಗರಾಜ್, ಈ ವರ್ಷ ಮುಂಗಾರು ಕೈಕೊಟ್ಟಿರುವುದರಿಂದ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಿದೆ. ಇಂತಹ ಕೊರತೆಯ ನಡುವೆಯೂ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ ಈಗಾಗಲೇ 3 ಟಿಎಂಸಿ ಅಡಿ ನೀರು ಹರಿಸಲಾಗಿದೆ. ಮತ್ತೆ ಹೆಚ್ಚುವರಿಯಾಗಿ 1 ಟಿಎಂಸಿ ಅಡಿ ನೀರು ಹರಿಬಿಡಲು ಹೊರಡಿಸಿರುವ ಆದೇಶ ಅವೈಜ್ಞಾನಿಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Shimoga-Davanagere-farmers-protest-at-Bhadra-Dam

ರೈತ ಮುಖಂಡ ಡಿ.ವಿ. ವೀರೇಶ್ ಮಾತನಾಡಿ, ಹೆಚ್ಚುವರಿಯಾಗಿ ನೀರು ಬಿಡುವುದರಿಂದ ಮುಂಬರುವ ಬೇಸಿಗೆಯಲ್ಲಿ ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿಯುವ ನೀರು ಹಾಗೂ ತೋಟಗಾರಿಕಾ ಬೆಳೆಗಳಿಗೆ ತೀವ್ರ ಅಭಾವ ಎದುರಾಗಲಿದೆ ಎಂದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಪ್ರತಿಭಟನಾ ಸ್ಥಳಕ್ಕೆ ಭದ್ರಾವತಿ ತಹಶೀಲ್ದಾರ್ ಪ್ರದೀಪ್ ದೇವಗಿರಿ ಭೇಟಿ ನೀಡಿ ರೈತರಿಂದ ಮನವಿ ಸ್ವೀಕರಿಸಿದರು. ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಕೆ.ಟಿ. ಗಂಗಾಧರ್, ಯಶವಂತರಾವ್ ಘೋರ್ಪಡೆ ಸೇರಿದಂತೆ ಹಲವರು ಭಾಗವಹಿಸಿದ್ದರು.