SHIVAMOGGA LIVE NEWS | BHADRAVATHI | 21 ಜೂನ್ 2022
ಮಾಜಿ ಶಾಸಕ ಅಪ್ಪಾಜಿಗೌಡ (APPAJI GOWDA) ಅವರ ಹುಟ್ಟುಹಬ್ಬವನ್ನು (BIRTHDAY) ಕುಟುಂಬದವರು, ಅಭಿಮಾನಿಗಳು ಆಚರಿಸಿದರು. ಭದ್ರಾವತಿ ತಾಲೂಕಿನ ವಿವಿಧೆಡೆ ಅಪ್ಪಾಜಿಗೌಡ ಅವರನ್ನು ಜನರು ಸ್ಮರಿಸಿಕೊಂಡರು.
ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬ
ಹುಟ್ಟುಹಬ್ಬದ ಅಂಗವಾಗಿ ಮಾಜಿ ಶಾಸಕ ಅಪ್ಪಾಜಿಗೌಡ ಅವರ ಕುಟುಂಬದವರು ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ತೋಟದಲ್ಲಿ ಅಪ್ಪಾಜಿಗೌಡ ಅವರ ಸಮಾಧಿ ಸ್ಥಳವಿದೆ. ಅಲ್ಲಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಲಾಯಿತು.
ಅಪ್ಪಾಜಿಗೌಡ ಅವರ ಅಭಿಮಾನಿಗಳು, ತಾಲೂಕಿನ ವಿವಿಧೆಡೆಯ ಜನರು ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು.
ನೋಟ್ ಪುಸ್ತಕರ ವಿತರಣೆ
ಅಪ್ಪಾಜಿಗೌಡ ಅವರ ಹುಟ್ಟುಹಬ್ಬದ ಅಂಗವಾಗಿ ಜನ್ನಾಪುರದಲ್ಲಿ ಜೆಡಿಎಸ್ ಮುಖಂಡರಾದ ರಾಧಾ ಪ್ರಭಾಕರ್ ಅವರು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ ಮಾಡಿದರು. ಶಾರದಾ ಅಪ್ಪಾಜಿಗೌಡ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸುಮಾರು 300 ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ ಮಾಡಲಾಯಿತು. 100ಕ್ಕೂ ಹೆಚ್ಚು ಮಹಿಳೆಯರಿಗೆ ಸೀರೆ ವಿತರಣೆ ಮಾಡಲಾಯಿತು. ಜೆಡಿಎಸ್ ಪಕ್ಷದ ಹಲವು ಮುಖಂಡರು ಈ ವೇಳೆ ಉಪಸ್ಥಿತರಿದ್ದರು.
ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ
ಭದ್ರಾವತಿ KSRTC ಬಸ್ ನಿಲ್ದಾಣದ ಮುಂಭಾಗದ ಪೆಟ್ರೋಲ್ ಬಂಕ್’ನಲ್ಲಿ ಕೇಕ್ ಕತ್ತರಿಸಿ ಅಪ್ಪಾಜಿಗೌಡ ಅವರ ಹುಟ್ಟುಹಬ್ಬ ಆಚರಿಸಲಾಯಿತು. ಶಾರದಾ ಅಪ್ಪಾಜಿಗೌಡ ಮತ್ತು ಕುಟುಂಬದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಜೆಡಿಎಸ್ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಅಪ್ಪಾಜಿಗೌಡ ಅವರನ್ನು ಸ್ಮರಿಸಿದರು.
ತಾಲೂಕಿನ ವಿವಿಧೆಡೆ ಅಪ್ಪಾಜಿ ಸ್ಮರಣೆ
ಇನ್ನು, ತಾಲೂಕಿನ ವಿವಿಧೆಡೆ ಮಾಜಿ ಶಾಸಕ ಅಪ್ಪಾಜಿಗೌಡ ಅವರನ್ನು ಸ್ಮರಿಸಲಾಯಿತು. ಅಭಿಮಾನಿಗಳು ಅಪ್ಪಾಜಿಗೌಡ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಸಿಹಿ ಹಂಚಿದರು. ಅಲ್ಲದೆ ಅಪ್ಪಾಜಿಗೌಡ ಅವರು ತಮ್ಮೂರಿಗೆ ನೀಡಿದ ಕೊಡುಗೆಯನ್ನು ಸ್ಮರಿಸಿದರು.
ಇದನ್ನೂ ಓದಿ – ಮಾಜಿ ಶಾಸಕ ಅಪ್ಪಾಜಿಗೌಡರ ಕುರಿತು ಈ 15 ವಿಚಾರಗಳು ನಿಮಗೆ ಗೊತ್ತಿದೆಯಾ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.