
ಶಿವಮೊಗ್ಗ ಲೈವ್.ಕಾಂ | BHADARAVATHI NEWS | 3 NOVEMBER 2020
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಭದ್ರಾವತಿ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಅವರ ಹೆಸರು ಇಡುವವರೆಗೆ ಹೋರಾಟ ಮುಂದುವರೆಸಲಾಗುತ್ತದೆ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್.ರಾಜು ತಿಳಿಸಿದರು.
ಹೊಟೇಲ್ ಒಂದರ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಈ ಕುರಿತು ಮಾತನಾಡಿದ ರಾಜು, ಬಸ್ ನಿಲ್ದಾಣಕ್ಕೆ ಅಪ್ಪಾಜಿ ಅವರ ಹೆಸರನ್ನು ಇಡಬೇಕು ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ನೇತೃತ್ವದಲ್ಲಿ ಒಂದು ಸುತ್ತಿನ ಹೋರಾಟ ನಡೆಸಲಾಗಿದೆ. ಆದರೆ ತಾಲೂಕು ಆಡಳಿತ ಈ ಬಗ್ಗೆ ಗಮನ ವಹಿಸಿಲ್ಲ. ಹೋರಾಟವನ್ನು ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗುವ ಯೋಚನೆ ಮಾಡಬೇಕಾಗಿದೆ ಎಂದರು.
ಈ ಕುರಿತು ಸಹಿ ಸಂಗ್ರಹ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮನವಿ ಸಲ್ಲಿಸುವ ಕುರಿತು ನಿರ್ಣಯಿಸಲಾಯಿತು.
ಪ್ರಮುಖರಾದ ಕರಿಯಪ್ಪ, ಮಣಿಶೇಖರ್, ಜೆ.ಪಿ.ಯೋಗೇಶ್, ಕರುಣಾಮೂರ್ತಿ, ಶಿಮುಲ್ ಅಧ್ಯಕ್ಷ ಆನಂದ್, ಧರ್ಮೇಗೌಡ, ಯಶೋದಮ್ಮ, ಸುಧಾಮಣಿ ಸೇರಿದಂತೆ ಹಲವರು ಸಭೆಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






