ಶಿವಮೊಗ್ಗ ಲೈವ್.ಕಾಂ | HOLEHONNURU NEWS | 28 ಜೂನ್ 2020
ದುಬೈನಿಂದ ಹಿಂತಿರುಗಿದ್ದ ಯುವಕನೊಬ್ಬನಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಭದ್ರಾವತಿ ತಾಲೂಕು ಅರಬಿಳಚಿ ಗ್ರಾಮದ ಬೀದಿಯೊಂದನ್ನು ಸೀಲ್ ಡೌನ್ ಮಾಡಲಾಗಿದೆ. ಅಕ್ಕಪಕ್ಕದ ಬೀದಿಗಳನ್ನು ಬಫರ್ ಜೋನ್ ಎಂದು ಘೋಷಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಉದ್ಯೋಗ ನಿಮಿತ್ತ ದುಬೈನಲ್ಲಿದ್ದ ಯುವಕ ಊರಿಗೆ ಹಿಂತಿರುಗಿದ್ದ. ಬೆಂಗಳೂರಿನಲ್ಲಿ ಹತ್ತು ದಿನ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದ. ಅಲ್ಲಿ ಕರೋನ ಪರೀಕ್ಷೆಯ ವರದಿ ನೆಗೆಟಿವ್ ಎಂದು ಬಂದಿತ್ತು. ಹಾಗಾಗಿ ಜೂ.24ರಂದು ಅರಬಿಳಚಿ ಗ್ರಾಮಕ್ಕೆ ಬಂದಿದ್ದ.
ಈತನಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಯುವಕನ ಪ್ರಾಥಮಿಕ ಸಂಪರ್ಕದಲ್ಲಿದ್ದ ಅವರ ಕುಟುಂಬದವರಿಗೂ ಆರೋಗ್ಯ ಪರೀಕ್ಷೆ ನಡೆಸಲಾಗಿದೆ. ಇನ್ನು ಯುವಕನ ಸಂಪರ್ಕದಲ್ಲಿ ಇದ್ದವರನ್ನು ಪತ್ತೆ ಹಚ್ಚಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]