ಪಿಡಿಒ ವಿರುದ್ಧ ಹಲ್ಲೆಗೆ ಯತ್ನ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯನ ವಿರುದ್ಧ ದೂರು

SHIVAMOGGA LIVE NEWS | BHADRAVATHI | 22 ಜುಲೈ 2022

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಒಬ್ಬರ ಮೇಲೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರು ಅವಾಚ್ಯವಾಗಿ ನಿಂದಿಸಿ, ಹಲ್ಲೆಗೆ (ASSAULT) ಮುಂದಾಗಿದ್ದರು ಎಂದು ಆರೋಪಿಸಿ, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga Nanjappa Hospital

ಭದ್ರಾವತಿ ತಾಲೂಕು ದೊಡ್ಡೇರಿ (DODDERI) ಗ್ರಾಮ ಪಂಚಾಯಿತಿಯಲ್ಲಿ ಘಟನೆ ಸಂಭವಿಸಿದೆ. ಪಿಡಿಒ ಶಿವಶಂಕರ ಮೂರ್ತಿ ಅವರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರ ವಿರುದ್ಧ ದೂರು ನೀಡಿದ್ದಾರೆ.

ಪಿಡಿಒ ಶಿವಶಂಕರ ಮೂರ್ತಿ ಅವರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ ಮಾಜಿ ಸದಸ್ಯರೊಬ್ಬರು ಏಕಾಏಕಿ ಕಚೇರಿಗೆ ಬಂದು ಅವಾಚ್ಯವಾಗಿ ನಿಂದಿಸಿದ್ದಾರೆ. ನಮ್ಮ ಕಡೆಯವರ ಮನೆ ಸೋರುತ್ತಿದೆ. ಪಿಡಿಒ ಇಲ್ಲಿ ಸುಖವಾಗಿ ಕುಳಿತಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿ, ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

ಅಲ್ಲದೆ ಹಲ್ಲೆಗೂ (ASSAULT) ಮುಂದಾಗಿದ್ದಾರೆ. ಈ ವೇಳೆ ಇತರೆ ಸಿಬ್ಬಂದಿ ತಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಸವಳಂಗ ರಸ್ತೆ ಪಕ್ಕದ ಕೃಷಿ ನಗರದ ಬಳಿ ಪೊಲೀಸರಿಂದ ದಾಳಿ, ಮೂವರು ಅರೆಸ್ಟ್

https://chat.whatsapp.com/Doh0PyFFSiTBZY73X533cb

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Bhadravathi News Graphics

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment