ಭದ್ರಾವತಿಯಲ್ಲಿ ಯುವಕನ ಮೇಲೆ ಹಲ್ಲೆ ಬೆನ್ನಿಗೆ ವಿಡಿಯೋ ವೈರಲ್

 SHIVAMOGGA LIVE NEWS 

ಭದ್ರಾವತಿ| ಮನೆ ಮುಂದಿನ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಈ ನಡುವೆ ಅಂದರ್ ಬಾಹರ್ ವಿಡಿಯೋ ವೈರಲ್ ಆಗಿದ್ದು, ಹಲ್ಲೆಗೆ ಇದುವೆ ಪ್ರಮುಖ ಕಾರಣವಿರಬಹುದು ಎಂದು ಶಂಕಿಸಲಾಗಿದೆ.

Shimoga Nanjappa Hospital

ಭದ್ರಾವತಿ ನೆಹರು ನಗರ ನಿವಾಸಿ ಸುನಿಲ್ (28) ಎಂಬಾತನ ಮೇಲೆ ಹಲ್ಲೆಯಾಗಿದೆ. ಭದ್ರಾವತಿಯ ಮುಬಾರಕ್ ಅಲಿಯಾಸ್ ಡಿಚ್ಚಿ (26) ಎಂಬಾತ ಹಲ್ಲೆ ನಡೆಸಿದ್ದಾನೆ.

ಕೆಲಸಕ್ಕೆ ಹೋಗಲು ಸುನಿಲ್ ತನ್ನ ಮನೆ ಮುಂದಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಮುಬಾರಕ್ ಅಲಿಯಾಸ್ ಡಿಚ್ಚಿ, ಸುನಿಲನನ್ನು ಅಡ್ಡಗಟ್ಟಿದ್ದಾನೆ. ಎಡಗೈ, ಭುಜ ಮತ್ತು ತಲೆಗೆ ಕೈಯಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಲ್ಲೆ ಬೆನ್ನಿಗೆ ವಿಡಿಯೋ ವೈರಲ್

ಹಲ್ಲೆ ಬೆನ್ನಿಗೆ ವಿಡಿಯೋ ವೈರಲ್ ಆಗಿದೆ. ಯುವಕರ ಗುಂಪೊಂದು ಗುಡಿ ಗುಡಿ ಜೂಜಾಟ ಆಡುತ್ತಿರುವುದನ್ನು ವ್ಯಕ್ತಿಯೊಬ್ಬರು ಸೆರೆ ಹಿಡಿದಿದ್ದಾರೆ. ಗುಡಿ ಗುಡಿ ಜೂಜಾಟ ಆಡುತ್ತಿರುವವರಲ್ಲಿ ಸುನಿಲ್ ಕೂಡ ಇರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನು, ಆ ವಿಡಿಯೋ ರೆಕಾರ್ಡ್ ಮಾಡಿದ್ದು ಮುಬಾರಕ್ ಅಲಿಯಾಸ್ ಡಿಚ್ಚಿ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಸುನಿಲ್ ಹೇಳಿಕೆ ಏನು?

ಇತ್ತ ಹಲ್ಲೆ ಬೆನ್ನಿಗೆ ಸುನಿಲ್ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಇದರ ವಿಡಿಯೋ ಶಿವಮೊಗ್ಗ ಲೈವ್.ಕಾಂಗೆ ಲಭ್ಯವಾಗಿದೆ. ‘ವಿಕಲಾಂಗ ವ್ಯಕ್ತಿಯೊಬ್ಬರ ಜೊತೆಗೆ ಮುಬಾರಕ್ ಜಗಳವಾಡುತ್ತಿದ್ದ. ನಿನ್ನೆ ಇದನ್ನು ನಾನು ಬಿಡಿಸಿದ್ದೆ. ಹಾಗಾಗಿ ಇವತ್ತು ನನ್ನನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾನೆ’ ಎಂದು ಹೇಳಿಕೆ ನೀಡಿದ್ದಾನೆ.

ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣದ ಬೆನ್ನಿಗೆ ಭದ್ರಾವತಿಯಲ್ಲಿಯು ನಿಷೆಧಾಜ್ಞೆ ಜಾರಿಗೊಳಿಸಲಾಗಿತ್ತು. ಈಗ ಸುನಿಲ್ ಮೇಲೆ  ಮುಬಾರಕ್ ಹಲ್ಲೆ ನಡೆಸಿರುವುದು ಕೆಲಕಾಲ ಗೊಂದಲ ಮೂಡಿಸಿತ್ತು.

ಘಟನೆ ಸಂಬಂಧ ಭದ್ರಾವತಿ ಹಳೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಟಿವಿ ಚಾನಲ್’ಗಳಲ್ಲಷ್ಟೆ ‘ಶಿವಮೊಗ್ಗ ಪ್ರಕ್ಷುಬ್ದ’, ಈಗ ಹೇಗಿದೆ ನಗರದ ಪರಿಸ್ಥಿತಿ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : August 16, 2022 at 1:43 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಆಗಷ್ಟ್ 16, 2022

Leave a Comment