ಬೈಪಾಸ್ ರಸ್ತೆಯಲ್ಲಿ ವ್ಯಕ್ತಿ ಕಣ್ಣಿಗೆ ಖಾರದ ಪುಡಿ ಎರಚಿ, ಬಿಯರ್ ಬಾಟಲಿಯಿಂದ ತಲೆಗೆ ಹೊಡೆದ ಅಪರಿಚಿತರು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

 SHIVAMOGGA LIVE NEWS 

BHADRAVATHI| ರಸ್ತೆ ಪಕ್ಕದಲ್ಲಿ ಮೂತ್ರ ವಿಸರ್ಜನೆ ಮಾಡುತ್ತ ನಿಂತಿದ್ದ ವ್ಯಕ್ತಿಗೆ ಹಿಂದಿನಿಂದ ಬಂದು ಕಣ್ಣಿಗೆ ಖಾರದ ಪುಡಿ ಎರಚಿ, ಬಿಯರ್ ಬಾಟಲಿಯಿಂದ ತಲೆಗೆ ಹೊಡೆದು ಇಬ್ಬರು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. (attack at bypass road)

Shimoga Nanjappa Hospital

ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ನರೇಂದ್ರ ಎಂಬಾತ ಗಾಯಗೊಂಡಿದ್ದಾರೆ. ಅವರನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

(attack at bypass road)

ಘಟನೆಗೇನು ಕಾರಣ?

ಡ್ರೈ ಫ್ರೂಟ್ ವ್ಯಾಪಾರ ಮಾಡುತ್ತಿರುವ ನೆರೇಂದ್ರ ಅವರು ಗುರುವಾರ ರಾತ್ರಿ ತಮ್ಮ ಮನೆಯಿಂದ ಬೈಪಾಸ್ ರಸ್ತೆಯ ಪೆಟ್ರೋಲ್ ಬಂಕ್ ಪಕ್ಕದ ಬೀಡಾ ಅಂಗಡಿಗೆ ತೆರಳಿದ್ದರು. ಸ್ವಲ್ಪ ಹೊತ್ತು ಅಂಗಡಿ ಬಳಿ ಇದ್ದು ಮನೆಗೆ ಹಿಂತಿರುಗುತ್ತಿದ್ದರು.  (attack at bypass road)

ಕ್ಲಿಕ್ ಮಾಡಿ ಇದನ್ನೂ ಓದಿ ತೋಟದಿಂದ ಹಸಿ ಅಡಕೆ ಕದಿಯುತ್ತಿದ್ದವರನ್ನು ಊರವರೆ ಹಿಡಿದು ಪೊಲೀಸರಿಗೆ ಒಪ್ಪಿಸಿದರು

ರಾತ್ರಿ 9.30ರ ಹೊತ್ತಿಗೆ ಬೈಪಾಸ್ ರಸ್ತೆ ಬಳಿ ಬಂದು ಬೈಕ್ ನಿಲ್ಲಿಸಿದ್ದರು. ಮೂತ್ರ ವಿಸರ್ಜನೆ ಮಾಡಿ ಹಿಂತಿರುಗುವ ಹೊತ್ತಿಗೆ ಇಬ್ಬರು ಅಪರಿಚಿತರು ನರೇಂದ್ರ ಅವರ ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ಅಲ್ಲದೆ ಬಿಯರ್ ಬಾಟಲಿಯಿಂದ ತಲೆಗೆ ಹೊಡೆದಿದ್ದಾರೆ.

ನೋವಿನಿಂದ ನರೇಂದ್ರ ಅವರು ಜೋರಾಗಿ ಕೂಗಿಕೊಂಡಿದ್ದಾರೆ. ಆಗ ಅಪರಿಚಿತರು ಸ್ಥಳದಿಂದ ಪರಾರಿಯಾಗಿದ್ದಾರೆ. ಭದ್ರಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ನರೇಂದ್ರ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment