ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ನಗರಸಭೆ ವ್ಯಾಪ್ತಿಯ ಸುರಗಿತೋಪಿನಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ (Commotion) ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ.
ಈ ಸಂಬಂಧ ಎರಡೂ ಗುಂಪುಗಳ ವಿರುದ್ಧ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏನಿದು ಪ್ರಕರಣ? ಆಗಿದ್ದೇನು?
ಸುರಗಿತೋಪು 4ನೇ ತಿರುವಿನಲ್ಲಿ ಅನ್ನಪೂರ್ಣೇಶ್ವರಿ ಯುವಕರ ಸೇವಾ ಸಮಿತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆ ಬುಧವಾರ ನಡೆಯುತ್ತಿತ್ತು. ರಾತ್ರಿ 10.30ರ ಸಮಯದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಕರ್ತವ್ಯದಲ್ಲಿದ್ದ ಪೇಪರ್‌ಟೌನ್ ಪೊಲೀಸ್ ಠಾಣೆಯ ಎಎಸ್‌ಐ ಕೃಷ್ಣಮೂರ್ತಿ ಅವರು ಗಲಾಟೆ ಬಿಡಿಸಲು ಮುಂದಾಗಿದ್ದಾರೆ. ಈ ವೇಳೆ ಅವರ ಬಟ್ಟೆ ಹರಿದು ಹಲ್ಲೆಗೆ ಯತ್ನಿಸಲಾಗಿದೆ ಎಂದು ತಿಳಿದುಬಂದಿದೆ.
ಮೆರವಣಿಗೆಯ ವಿಡಿಯೊ ಚಿತ್ರೀಕರಣದಲ್ಲಿ ತೊಡಗಿದ್ದ ಪೊಲೀಸ್ ಸಿಬ್ಬಂದಿ ಅಜಿತ್ ಹಾಗೂ ಗುಂಪಿನಲ್ಲಿದ್ದ ಜೀವನ್ ಎಂಬಾತನ ಮೇಲೂ ತೀವ್ರ ಹಲ್ಲೆ ನಡೆಸಲಾಗಿದ್ದು, ಇಬ್ಬರನ್ನೂ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ » ಭದ್ರಾವತಿ ಡಿವೈಎಸ್‌ಪಿಯಾಗಿ ದಕ್ಷತಾ ಪದಕ ವಿಜೇತ ಪೊಲೀಸ್ ಅಧಿಕಾರಿ
Commotion
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















