ಭದ್ರಾವತಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಭದ್ರಾವತಿ: ನಗರಸಭೆ ವ್ಯಾಪ್ತಿಯ ಸುರಗಿತೋಪಿನಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ (Commotion) ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ. 

ಈ ಸಂಬಂಧ ಎರಡೂ ಗುಂಪುಗಳ ವಿರುದ್ಧ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ? ಆಗಿದ್ದೇನು?

ಸುರಗಿತೋಪು 4ನೇ ತಿರುವಿನಲ್ಲಿ ಅನ್ನಪೂರ್ಣೇಶ್ವರಿ ಯುವಕರ ಸೇವಾ ಸಮಿತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆ ಬುಧವಾರ ನಡೆಯುತ್ತಿತ್ತು. ರಾತ್ರಿ 10.30ರ ಸಮಯದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಕರ್ತವ್ಯದಲ್ಲಿದ್ದ ಪೇಪರ್‌ಟೌನ್ ಪೊಲೀಸ್ ಠಾಣೆಯ ಎಎಸ್‌ಐ ಕೃಷ್ಣಮೂರ್ತಿ ಅವರು ಗಲಾಟೆ ಬಿಡಿಸಲು ಮುಂದಾಗಿದ್ದಾರೆ. ಈ ವೇಳೆ ಅವರ ಬಟ್ಟೆ ಹರಿದು ಹಲ್ಲೆಗೆ ಯತ್ನಿಸಲಾಗಿದೆ ಎಂದು ತಿಳಿದುಬಂದಿದೆ.

ಮೆರವಣಿಗೆಯ ವಿಡಿಯೊ ಚಿತ್ರೀಕರಣದಲ್ಲಿ ತೊಡಗಿದ್ದ ಪೊಲೀಸ್ ಸಿಬ್ಬಂದಿ ಅಜಿತ್ ಹಾಗೂ ಗುಂಪಿನಲ್ಲಿದ್ದ ಜೀವನ್‌ ಎಂಬಾತನ ಮೇಲೂ ತೀವ್ರ ಹಲ್ಲೆ ನಡೆಸಲಾಗಿದ್ದು, ಇಬ್ಬರನ್ನೂ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

Suragitopu-Incident-Commotion.

ಇದನ್ನೂ ಓದಿ » ಭದ್ರಾವತಿ ಡಿವೈಎಸ್‌ಪಿಯಾಗಿ ದಕ್ಷತಾ ಪದಕ ವಿಜೇತ ಪೊಲೀಸ್‌ ಅಧಿಕಾರಿ

Commotion

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment