ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 ಮಾರ್ಚ್ 2022
ರಾತ್ರಿ ಊಟ ಮುಗಿಸಿ ಹೊರ ಬಂದ ಯುವಕನ ಮೇಲೆ ಗುಂಪೊಂದು ದಾಳಿ ಮಾಡಿದೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲು ಮುಂದಾಗಿದೆ ಎಂದು ಆರೋಪಿಸಲಾಗಿದೆ. ಸ್ಥಳೀಯರು ಯುವಕನನ್ನು ರಕ್ಷಣೆ ಮಾಡಿದ್ದಾರೆ. ಘಟನೆ ಸಂಬಂಧ ಹತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಸಂತೋಷ್ (23) ಎಂಬಾತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭದ್ರಾವತಿಯ ಹೊಸಬುಳ್ಳಾಪುರದಲ್ಲಿ ಘಟನೆ ಸಂಭವಿಸಿದೆ.
ಏನಿದು ಪ್ರಕರಣ?
ಹೊಸಬುಳ್ಳಾಪುರದ ಸಂತೋಷ್ ರಾತ್ರಿ ಊಟ ಮುಗಿಸಿ ಮನೆಯಿಂದ ಹೊರ ಬಂದಿದ್ದಾನೆ. ಈ ವೇಳೆ ಕಾಕಾ ಅಂಗಡಿ ಸರ್ಕಲ್’ನಲ್ಲಿ ಕೆಲವು ಯುವಕರು ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದರು. ಸಂತೋಷ್ ಅತ್ತ ತೆರಳಿದ್ದಾನೆ.
ಸಂತೋಷನನ್ನು ಗಮನಿಸಿದ ಯುವಕರು, ಆತನ ವಿರುದ್ಧ ದಾಳಿ ನಡೆಸಿದ್ದಾರೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಕೊಲ್ಲುವ ಉದ್ದೇಶದಿಂದಲೆ ದಾಳಿ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಗಾಯಗೊಂಡಿದ್ದ ಸಂತೋಷ್ ಜೋರಾಗಿ ಕೂಗಿಕೊಂಡಿದ್ದರಿಂದ ಸ್ಥಳೀಯರು ಮನೆಯಿಂದ ಹೊರ ಬಂದಿದ್ದಾರೆ. ಜನ ಸೇರಿದ್ದರಿಂದ ಯುವಕರ ಗುಂಪು ಎರಡು ಕಾರು, ಒಂದು ಬೈಕಿನಲ್ಲಿ ಪರಾರಿಯಾಗಿದೆ.
ಘಟನೆ ಸಂಬಂಧ ರಾಜ, ಚೇತನ್, ಅಜಿತ್, ಜೀವಾ, ಭರತ, ರವಿ, ಪವನ, ಪ್ರಜ್ವಲ್, ಸಂತೋಷ, ಮದನ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಭದ್ರಾವತಿಯ ಪೇಪರ್ ಟೌನ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















