ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 APRIL 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
BHADRAVATHI : ರಾತ್ರಿ ಊಟದ ಮುಗಿಸಿ ವಾಕಿಂಗ್ ತೆರಳಿದ್ದವರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಲಾಗಿದೆ. ಭದ್ರಾವತಿ ನಗರದ ಹೊಸಮನೆ ಬಡಾವಣೆಯ ಶಿವಣ್ಣ ಸಾಮಿಲ್ ಬಳಿ ಘಟನೆ ಸಂಭವಿಸಿದೆ. ಕುಲದೀಪ್ ಮತ್ತು ನಂದನ್ ಎಂಬುವವರ ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಕುಲದೀಪ್ ಮತ್ತು ನಂದನ್ ಊಟ ಮುಗಿಸಿ ರಾತ್ರಿ ವಾಕಿಂಗ್ ತೆರಳಿದ್ದರು. ಈ ವೇಳೆ ಮೂವರು ಯುವಕರು ಇವರನ್ನು ಅಡ್ಡಗಟ್ಟಿ ಮೊಬೈಲ್ ಕೊಡುವಂತೆ ಬೆದರಿಸಿದ್ದಾರೆ. ನಿರಾಕರಿಸಿದಾಗ ಇಬ್ಬರ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. ಅಲ್ಲೆ ಬಿದ್ದಿದ್ದ ಕಲ್ಲಿನಿಂದಲು ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಸ್ಥಳೀಯರು ಗಲಾಟೆ ಬಿಡಿಸಿ ಗಾಯಾಳುಗಳನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹೊಸಮನೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಸವಳಂಗ – ಆಯನೂರು ಹೆದ್ದಾರಿಯಲ್ಲಿ ಓಮ್ನಿ, ಟಾಟಾ ಏಸ್ ಮುಖಾಮುಖಿ ಡಿಕ್ಕಿ