ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 15 ಜನವರಿ 2020
ಜಿಲ್ಲಾ ಪಂಚಾಯಿತಿ ಸದಸ್ಯರೊಬ್ಬರ ಮೇಲೆ ಭದ್ರಾವತಿಯಲ್ಲಿ ಹಲ್ಲೆ ನಡೆದಿದೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಜಿ ಶಾಸಕ ಅಪ್ಪಾಜಿಗೌಡ ಸೇರಿದಂತೆ ಹಲವು ಪ್ರಮುಖರು ಆಸ್ಪತ್ರೆಗೆ ಭೇಟಿ ನೀಡಿದ್ದರು.
ಹಲ್ಲೆಗೇನು ಕಾರಣ?
ಕೂಡ್ಲಿಗೆರೆ ಜಿಲ್ಲಾ ಪಂಚಾಯಿತಿ ಸದಸ್ಯ ಮಣಿಶೇಖರ್ ಹಲ್ಲೆಗೊಳಗಾಗಿದ್ದಾರೆ. ಭದ್ರಾವತಿ ತಾಲೂಕು ಅರಳಿಹಳ್ಳಿ ಕೆರೆಯ ಹೂಳು ತೆಗಿಸುವ ಕಾರ್ಯ ನಡೆಯುತ್ತಿತ್ತು. ಜಿಲ್ಲಾ ಪಂಚಾಯಿತಿ ವತಿಯಿಂದ ನಡೆಯುತ್ತಿದ್ದ ಕಾಮಗಾರಿಯ ಪರಿಶೀಲನೆಗೆ ಮಣಿಶೇಖರ್ ಅವರು ತೆರಳಿದ್ದರು.
ಈ ವೇಳೆ ಕೆರೆ ಒತ್ತುವರಿಗೆ ತೆರವು ಮಾಡಲಾಗುತ್ತಿದೆ ಎಂದು ಕೆಲವರು ಗಲಾಟೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಗ್ರಾಮದ ಮಲ್ಲಿಕಾರ್ಜುನ ಮತ್ತು ಆತನ ಸಹೋದರ ಮಣಿಶೇಖರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಮಣಿಶೇಖರ್ ಅವರು ಭದ್ರಾವತಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
ಸ್ಟೇಷನ್ ಮುಂದೆ ಮಾಜಿ ಎಂಎಲ್ಎ ಪ್ರೊಟೆಸ್ಟ್
ಮತ್ತೊಂದೆಡೆ ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ, ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಪ್ರತಿಭಟನೆ ನಡೆಸಿದರು. ಭದ್ರಾವತಿ ಗ್ರಾಮಾಂತರ ಠಾಣೆ ಮುಂದೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
‘ಜಿಲ್ಲಾ ಪಂಚಾಯಿತಿ ಸದಸ್ಯ ಮಣಿಶೇಖರ್ ಮೇಲೆ ಹಲ್ಲೆಯಾಗಿದೆ. ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೆ ಯತ್ನಿಸಲಾಗಿದೆ. ಆದರೆ ಪೊಲೀಸರು ಅವರಿಗೆ ಸ್ಟೇಷನ್ ಬೇಲ್ ಕೊಟ್ಟು ಕಳುಹಿಸಿದ್ದಾರೆ. ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು. ಯಾರದ್ದೋ ಒತ್ತಡಕ್ಕೆ ಮಣಿದು ಪೊಲೀಸರು ಕೆಲಸ ಮಾಡಬಾರದು. ಜ.17ರಂದು ಇದರ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ’ ಎಂದು ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ.
ಈ ನಡುವೆ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.
- ಕನಸಿನಕಟ್ಟೆಯಲ್ಲಿ ವಿದ್ಯುತ್ ಶಾಕ್ಗೆ ಯುವಕ ಸಾವು, ಹೇಗಾಯ್ತು ಘಟನೆ?
- ಆನೆ ದಾಳಿ, ಸಾಗರದಲ್ಲಿ MLA ನೇತೃತ್ವದಲ್ಲಿ ಮಹತ್ವದ ಮೀಟಿಂಗ್, ಏನೆಲ್ಲ ಚರ್ಚೆಯಾಯ್ತು?
- ಅಡಿಕೆ ಧಾರಣೆ | 6 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಶಿವಮೊಗ್ಗದಲ್ಲಿ ಪ್ರಕಟವಾಗುತ್ತೆ ಮತದಾರರ ಪಟ್ಟಿ, ನಿಮ್ ಹೆಸರಿದ್ಯಾ ಇಂದೇ ಚೆಕ್ ಮಾಡಿಕೊಳ್ಳಿ
- ಪದವಿ ಮುಗಿಸಿ ಉದ್ಯೋಗ ಸಿಗದ ಗುಡ್ ನ್ಯೂಸ್, ಇಂದಿನಿಂದ ವಿಶೇಷ ಅಭಿಯಾನ
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422